AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ ಬರ್ತ್‌ಡೇ ಬ್ಲಾಸ್ಟ್‌: ಒಂದೇ ಪಂದ್ಯದಲ್ಲಿ 5 ಐತಿಹಾಸಿಕ ದಾಖಲೆ!

ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 51 ಎಸೆತಗಳಲ್ಲಿ 74 ರನ್ ಸಿಡಿಸಿ ಮಿಂಚಿದ್ದಾರೆ. ಈ ಭರ್ಜರಿ ಅರ್ಧಶತಕದೊಂದಿಗೆ 'ಕಿಂಗ್ ಕೊಹ್ಲಿ' ಹಲವು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ವಿಶೇಷ ಎಂದರೆ, ನಿನ್ನೆ ತಮ್ಮ 37ನೇ ವಯಸ್ಸಿನ ಕೊನೆಯ ದಿನವನ್ನು ಮುಗಿಸಿದ ಕೊಹ್ಲಿ, 38ನೇ ವಯಸ್ಸಿಗೆ ಕಾಲಿಡುವ ಮುನ್ನಾದಿನವೇ ಈ ಹೊಸ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 05, 2026 | 8:24 AM

Share
ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ದಾಖಲೆಯ ನಾಗಾಲೋಟ ಮುಂದುವರೆದಿದೆ. ಈ ನಾಗಾಲೋಟದೊಂದಿಗೆ ಕಿಂಗ್ ಕೊಹ್ಲಿ ಮತ್ತೆ ಐದು ಮಹತ್ತರ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. . ಇದರಲ್ಲಿ ಕೆಲವು ವಿಶ್ವ ದಾಖಲೆ ಎಂಬುದು ವಿಶೇಷ. ಹಾಗಿದ್ರೆ 38ನೇ ವಯಸ್ಸಿಗೆ ಕಾಲಿಡುವ ಮುನ್ನ ಕೊಹ್ಲಿ ಬರೆದ ಹೊಸ ದಾಖಲೆಗಳಾವುವು ಎಂದು ನೋಡೋಣ... (PC: Gettyimages)

1 / 6
ವಿಶ್ವ ದಾಖಲೆ' ಬ್ರೇಕ್: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಚೇಸಿಂಗ್ ವೇಳೆ ಅತಿ ಹೆಚ್ಚು ರನ್ ಗಳಿಸಿದ್ದ ಸಚಿನ್ ತೆಂಡೂಲ್ಕರ್ (8,720 ರನ್) ಅವರ ದೀರ್ಘಕಾಲದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ನಿನ್ನೆ ಮುರಿದರು. ಸದ್ಯ ಚೇಸಿಂಗ್‌ನಲ್ಲಿ 8,741 ರನ್ ಕಲೆಹಾಕಿರುವ ವಿರಾಟ್, ಜಗತ್ತಿನ ನಂ.1 'ಚೇಸ್ ಮಾಸ್ಟರ್' ಆಗಿ ಹೊರಹೊಮ್ಮಿದ್ದಾರೆ. (PC: Gettyimages)

2 / 6
13 ಸಾವಿರ ರನ್​ಗಳು: ಏಕದಿನ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 13 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟರ್ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ (12,662 ರನ್) ಅವರ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: Gettyimages)

3 / 6
50 ಪ್ಲಸ್​ಗಳ ಅರ್ಧಶತಕ: ನ್ಯೂಝಿಲೆಂಡ್ ವಿರುದ್ಧ ಬಾರಿ ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ವಿದೇಶಿ ಪಿಚ್​ನಲ್ಲಿ 50 ಬಾರಿ 50+ ಸ್ಕೋರ್​ಗಳಿಸಿದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

4 / 6
ಕಿವೀಸ್ ವಿರುದ್ಧ ದಾಖಲೆ: ನ್ಯೂಝಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಕೊಹ್ಲಿ ಒಟ್ಟು 1,971 ರನ್ ಗಳಿಸುವ ಮೂಲಕ, ಕಿವೀಸ್ ಪಡೆ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ್ದ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಸಮಗಟ್ಟಿದ್ದಾರೆ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಇನ್ನೊಂದು ರನ್ ಗಳಿಸಿದರೆ ಈ ದಾಖಲೆಯೂ ಅವರ ಹೆಸರಿಗೆ ಬರಲಿದೆ. (PC: Gettyimages)

5 / 6
ಕ್ಯಾಚ್ ದಾಖಲೆ:  ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಥನ್ ಸ್ಮಿತ್ ಮತ್ತು ಕೈಲ್ ಜೇಮಿಸನ್ ಅವರ ಎರಡು ಅದ್ಭುತ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಕೊಹ್ಲಿ ಹೊಸ ಇತಿಹಾಸ ಬರೆದರು. ಏಕದಿನ ಕ್ರಿಕೆಟ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಅತಿ ಹೆಚ್ಚು ಕ್ಯಾಚ್ ಪಡೆದಿದ್ದ ಭಾರತೀಯ ಫೀಲ್ಡರ್ ಸಚಿನ್ ತೆಂಡೂಲ್ಕರ್ (19 ಕ್ಯಾಚ್) ಅವರ ದಾಖಲೆಯನ್ನು ಕೊಹ್ಲಿ (ಒಟ್ಟು 20 ಕ್ಯಾಚ್‌ಗಳೊಂದಿಗೆ) ಮುರಿದಿದ್ದಾರೆ. (PC: SonyLiv)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ

ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ

ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು

ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್

ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ

ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ

ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ

ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!

ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು