AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli vs Rohit Sharma: 4 ವರ್ಷದಲ್ಲಿ 4 ಸೋಲು: ಒಂದೇ ವರ್ಷದಲ್ಲಿ 3 ಸೋಲು..!

Virat Kohli vs Rohit Sharma: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 11, 2023 | 11:08 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಈ ಹಿಂದೆ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದ ಬಿಸಿಸಿಐ ಇದೀಗ ಮುಜುಗರಕ್ಕೊಳಗಾಗಿದೆ.

1 / 9
ಏಕೆಂದರೆ 2021 ರ ಅಂತ್ಯದಲ್ಲಿ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಆದರೀಗ ಒಂದೇ ವರ್ಷದೊಳಗೆ ಮೂರು ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುವಲ್ಲಿ ಹಿಟ್​ಮ್ಯಾನ್ ವಿಫಲರಾಗಿದ್ದಾರೆ.

2 / 9
ಅತ್ತ 2017 ರಿಂದ ಪೂರ್ಣ ಪ್ರಮಾಣದ ನಾಯಕರಾಗಿ ಆಯ್ಕೆಯಾಗಿದ್ದ ವಿರಾಟ್ ಕೊಹ್ಲಿ 4 ವರ್ಷಗಳಲ್ಲಿ 4 ಬಾರಿ ತಂಡಕ್ಕೆ ಕಪ್ ಗೆದ್ದುಕೊಡುವಲ್ಲಿ ವಿಫಲರಾಗಿದ್ದರೆ, ಇತ್ತ ರೋಹಿತ್ ಶರ್ಮಾ ಒಂದೇ ವರ್ಷದಲ್ಲಿ 3 ಪ್ರಮುಖ ಟೂರ್ನಿಗಳಲ್ಲಿ 3 ಬಾರಿ ವಿಫಲರಾಗಿದ್ದಾರೆ.

3 / 9
2017 ರಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪ್ರವೇಶಿಸಿತ್ತು. ಆದರೆ ಪಾಕಿಸ್ತಾನ್ ವಿರುದ್ಧ ಸೋಲುವ ಮೂಲಕ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

4 / 9
ಇನ್ನು 2019 ರ ಏಕದಿನ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ದ ಸೆಮಿಫೈನಲ್​ನಲ್ಲಿ ಮುಗ್ಗರಿಸಿತ್ತು.

5 / 9
ಹಾಗೆಯೇ 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾಗೂ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ಮತ್ತೆರಡು ಬಾರಿ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡುವಲ್ಲಿ ವಿಫಲರಾಗಿದ್ದರು. ಅಂದರೆ ಭಾರತ ತಂಡವು 4 ವರ್ಷಗಳಲ್ಲಿ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಒಟ್ಟು 4 ಬಾರಿ ವಿಫಲವಾಗಿದೆ.

6 / 9
ಆದರೆ 2022 ರಿಂದ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ರೋಹಿತ್ ಶರ್ಮಾ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

7 / 9
ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದಲೇ ಹೊರಬಿದ್ದರೆ, ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ಮುಗ್ಗರಿಸಿತ್ತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೋಲನುಭವಿಸಿದೆ. ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ಮೂರು ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ.

8 / 9
ಇತ್ತ ನಾಲ್ಕು ವರ್ಷಗಳಲ್ಲಿ 4 ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿರುವ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಕಪ್ತಾನನ ಪಟ್ಟ ನೀಡಲಾಗಿತ್ತು. ಇದೀಗ ಒಂದೇ ವರ್ಷದಲ್ಲಿ ಮೂರು ಪ್ರಮುಖ ಟೂರ್ನಿ ಸೋತಿರುವ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ.

9 / 9
Follow us
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ

ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ

ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ

ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ