Virat Kohli Wrong Jersey, IND vs PAK: ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು

India vs Pakistan, ICC World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಭಾರತ ಹಾಗೂ ಪಾಕಿಸ್ತಾನ ಪಂದ್ಯದಲ್ಲಿ ವಿಶೇಷ ಘಟನೆಯೊಂದು ನಡೆಯಿತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮಾಡಿದ ದೊಡ್ಡ ತಪ್ಪು ಎಲ್ಲರು ನೋಡುವಂತಾಯಿತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೊಹ್ಲಿ ವಿಭಿನ್ನ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರು.

Vinay Bhat
|

Updated on:Oct 14, 2023 | 5:10 PM

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗುತ್ತಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡ ಕಾರಣ ಪಾಕ್ ಬ್ಯಾಟಿಂಗ್ ನಡೆಸುತ್ತಿದೆ.

1 / 7
ಈ ಪಂದ್ಯದಲ್ಲಿ ವಿಶೇಷ ಘಟನೆಯೊಂದು ನಡೆಯಿತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮಾಡಿದ ದೊಡ್ಡ ತಪ್ಪು ಎಲ್ಲರು ನೋಡುವಂತಾಯಿತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕ್ ವಿಶ್ವಕಪ್ ಪಂದ್ಯದ ಆರಂಭದಲ್ಲಿ ಕೊಹ್ಲಿ ವಿಭಿನ್ನ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರು.

2 / 7
ಹೌದು, ಪಂದ್ಯ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಗೆ ಗೌರವ ಸೂಚಿಸುವ ಸಮಯದಲ್ಲಿ ಕೊಹ್ಲಿ ತ್ರಿವರ್ಣ ಪಟ್ಟೆಗಳಿರುವ ಜೆರ್ಸಿ ಬದಲಿಗೆ ಬಿಳಿ ಭುಜದ ಪಟ್ಟೆಗಳೊಂದಿಗೆ, ಅಂದರೆ ಭಾರತದ ಸಾಮಾನ್ಯ ಏಕದಿನ ಜೆರ್ಸಿಯನ್ನು ಧರಿಸಿರುವುದು ಕಂಡು ಬಂದಿದೆ. ಇದನ್ನು ಅಭಿಮಾನಿಗಳು ಗಮನಿಸಿದ್ದು, ಕೊಹ್ಲಿಯ ಫೋಟೋ ವೈರಲ್ ಆಗುತ್ತಿದೆ.

3 / 7
ಅಚ್ಚರಿ ಎಂದರೆ, ತಾನು ತಪ್ಪು ಜೆರ್ಸಿಯಲ್ಲಿ ಕಣಕ್ಕಿಳಿದಿರುವುದು ವಿರಾಟ್ ಕೊಹ್ಲಿ ಗಮನಕ್ಕೆ ಬಂದೇ ಇರಲಿಲ್ಲ. ಪಂದ್ಯ ಆರಂಭವಾಗಿ, ಪಾಕಿಸ್ತಾನ ತಂಡ ಬ್ಯಾಟಿಂಗ್ ಆರಂಭಿಸಿ ಒಂದು ಓವರ್ ಆದ ನಂತರ ಕೊಹ್ಲಿ ಡ್ರೆಸ್ಸಿಂಗ್ ರೂಮ್​ಗೆ ಹಿಂತಿರುಗಿದ್ದಾರೆ. ನಂತರ ವಿಶ್ವಕಪ್ ಜೆರ್ಸಿ ತೊಟ್ಟು ಮೈದಾನಕ್ಕೆ ಬಂದರು.

4 / 7
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೆಂಗ್ಯೂಯಿಂದ ಬಳಲುತ್ತಿದ್ದ ಶುಭ್​ಮನ್ ಗಿಲ್ ಗುಣಮುಖರಾಗಿದ್ದಾರೆ. ಇವರು ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅತ್ತ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಅಂತೆಯೆ ಆರ್. ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.

5 / 7
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 7
ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.

7 / 7

Published On - 4:43 pm, Sat, 14 October 23

Follow us