ಟೀಮ್ ಇಂಡಿಯಾ ಕ್ಯಾಂಪ್ ಬಿಟ್ಟು ದಿಢೀರ್ ಮನೆಗೆ ತೆರಳಿದ ವಿರಾಟ್ ಕೊಹ್ಲಿ: ಅಭಿಮಾನಿಗಳಲ್ಲಿ ಆತಂಕ
Virat Kohli fly back home to Mumbai: ಐಸಿಸಿ ವಿಶ್ವಕಪ್ನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಅಭ್ಯಾಸ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ತಿರುವನಂತಪುರಂ ತಲುಪಿದೆ. ಆದರೆ, ವಿರಾಟ್ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ. ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಕೊಹ್ಲಿ ಮುಂಬೈಗೆ ತೆರಳಲು ತಂಡದ ಮ್ಯಾನೇಜ್‌ಮೆಂಟ್‌ಗೆ ಅನುಮತಿ ಕೋರಿದ್ದಾರೆ ಎನ್ನಲಾಗಿದೆ.
1 / 7
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 5 ರಂದು ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಎಲ್ಲ ತಂಡಗಳು ಅಭ್ಯಾಸ ಪಂದ್ಯ ಆಡುತ್ತಿದೆ. ಭಾರತ ತನ್ನ ಎರಡನೇ ವಾರ್ಮ್-ಅಪ್ ಮ್ಯಾಚ್ ಅ. 3 ರಂದು ನೆದರ್ಲೆಂಡ್ಸ್ ವಿರುದ್ಧ ತಿರುವನಂತಪುರಂನಲ್ಲಿ ಆಡಲಿದೆ. ಈಗಾಗಲೇ ಟೀಮ್ ಇಂಡಿಯಾ ತಿರುವನಂತಪುರಂ ತಲುಪಿದೆ. ಆದರೆ, ವಿರಾಟ್ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ.
2 / 7
ರೋಹಿತ್ ಶರ್ಮಾ, ಕೋಚ್ ದ್ರಾವಿಡ್, ಹಾರ್ದಿಕ್ ಪಾಂಡ್ಯ ಸೇರಿದಂತೆ ವಿಶ್ವಕಪ್ ತಂಡದಲ್ಲಿರುವ ಎಲ್ಲ ಆಟಗಾರರು ಭಾನುವಾರ (ಅಕ್ಟೋಬರ್ 1) ತಿರುವನಂತಪುರಕ್ಕೆ ಪ್ರಯಾಣ ಬೆಳೆಸಿದರು. ಆದರೆ, ಭಾರತ ತಂಡದ ಬ್ಯಾಟಿಂಗ್ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಭಾಗವಾಗಿರಲಿಲ್ಲ. ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಕೊಹ್ಲಿ ಮುಂಬೈಗೆ ತೆರಳಲು ತಂಡದ ಮ್ಯಾನೇಜ್‌ಮೆಂಟ್‌ಗೆ ಅನುಮತಿ ಕೋರಿದ್ದಾರೆ ಎನ್ನಲಾಗಿದೆ.
3 / 7
“ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯ ಮೂಲವೊಂದು, ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಖಚಿತಪಡಿಸಿದೆ. ವಿರಾಟ್ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳುತ್ತಾರೆ, ” ಎಂದು ಕ್ರಿಕ್‌ಬಜ್ ಪ್ರಕಾರ ತಂಡದ ವಕ್ತಾರರು ವರದಿ ಮಾಡಿದ್ದಾರೆ.
4 / 7
ವರದಿಯ ಪ್ರಕಾರ, ಸೋಮವಾರ ತಿರುವನಂತಪುರದಲ್ಲಿ ಕೊಹ್ಲಿ ತಂಡವನ್ನು ಮತ್ತೆ ಸೇರಿಕೊಳ್ಳುವ ನಿರೀಕ್ಷೆಯಿದೆ, ಅಲ್ಲಿ ಭಾರತವು ಮಂಗಳವಾರ ನೆದರ್ಲೆಂಡ್ಸ್ ವಿರುದ್ಧ ಎರಡನೇ ಮತ್ತು ಅಂತಿಮ ಅಭ್ಯಾಸ ಪಂದ್ಯವನ್ನು ಆಡಲಿದೆ. ಗುವಾಹಟಿಯಲ್ಲಿ ಭಾರೀ ಮಳೆಯಿಂದಾಗಿ ಇಂಗ್ಲೆಂಡ್ ವಿರುದ್ಧದ ಭಾರತದ ಮೊದಲ ಅಭ್ಯಾಸ ಪಂದ್ಯ ರದ್ದುಗೊಳಿಸಲಾಗಿತ್ತು.
5 / 7
ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲೆಂಡ್ಸ್ ವಿರುದ್ಧ ನಡೆಯಲ್ಲಿರುವ ಎರಡನೇ ಅಭ್ಯಾಸ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ತಿರುವನಂತಪುರಂನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ.
6 / 7
ತಿರುವನಂತಪುರಂ ಮೈದಾನದಲ್ಲಿ ಶುಕ್ರವಾರದಂದು ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಕೂಡ ಆರಂಭವಾಗದೆ ರದ್ದಾಗಿದ್ದರೆ, ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯವೂ ಹಾಗೆಯೇ ರದ್ದಾಯಿತು.
7 / 7
ಭಾರತ-ನೆದರ್ಲೆಂಡ್ಸ್ ನಡುವಿನ ಅಭ್ಯಾಸ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.