Virat Kohli: 98 ರನ್​ಗಳಷ್ಟೇ ಬೇಕು; ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಪರ ವಿಶ್ವ ದಾಖಲೆ ಬರೆಯಲಿದ್ದಾರೆ ಕೊಹ್ಲಿ..!

Edited By:

Updated on: Sep 18, 2022 | 6:21 PM

Virat Kohli: ಇದುವರೆಗೆ ಭಾರತದ ಯಾವುದೇ ಬ್ಯಾಟ್ಸ್‌ಮನ್ ಟಿ20 ಮಾದರಿಯಲ್ಲಿ ಇಷ್ಟು ರನ್ ಗಳಿಸಿಲ್ಲ.

1 / 5
ವಿರಾಟ್ ಕೊಹ್ಲಿ ಏಷ್ಯಾಕಪ್ 2022 ರಲ್ಲಿ ಭರ್ಜರಿ ಫಾರ್ಮ್​ಗೆ ಮರಳಿದ್ದಾರೆ. 3 ವರ್ಷಗಳಿಂದ ಕಾಯುತ್ತಿದ್ದ ಶತಕದ ಆಸೆಯನ್ನು ಪೂರೈಸಿಕೊಂಡ ಕೊಹ್ಲಿ, ಈ ಟೂರ್ನಿಯಲ್ಲಿ 2 ಅರ್ಧ ಶತಕ ಹಾಗೂ 1 ಶತಕ ಸಿಡಿಸಿದ್ದರು. ಇದೀಗ ಆಸ್ಟ್ರೇಲಿಯ ವಿರುದ್ಧ ತನ್ನ ಶಕ್ತಿ ಪ್ರದರ್ಶನಕ್ಕೆ ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ವಿಶೇಷ ದಾಖಲೆಯನ್ನೂ ಮಾಡುವ ಹೊಸ್ತಿನಲಿದ್ದಾರೆ.

2 / 5

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ಸಿಗುವುದು ಖಚಿತ. ಒಂದು ವೇಳೆ ಕೊಹ್ಲಿ ಈ ಮೂರು ಪಂದ್ಯಗಳಿಂದ ಕೇವಲ 98 ರನ್ ಗಳಿಸಿದರೆ ಟಿ20 ಮಾದರಿಯಲ್ಲಿ 11,000 ರನ್ ಗಳಿಸಿದ ದಾಖಲೆ ಬರೆಯಲಿದ್ದಾರೆ.

3 / 5

ಈ ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕಿಂಗ್ ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದ ಯಾವುದೇ ಬ್ಯಾಟ್ಸ್‌ಮನ್ ಟಿ20 ಮಾದರಿಯಲ್ಲಿ ಇಷ್ಟು ರನ್ ಗಳಿಸಿಲ್ಲ.

4 / 5

ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ. ಗೇಲ್ 463 ಪಂದ್ಯಗಳಲ್ಲಿ 14,562 ರನ್ ಗಳಿಸಿದ್ದಾರೆ. ಶೋಯೆಬ್ ಮಲಿಕ್ 480 ಪಂದ್ಯಗಳಲ್ಲಿ 11,893 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಪೊಲಾರ್ಡ್ 611 ಪಂದ್ಯಗಳಲ್ಲಿ 11,837 ರೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

5 / 5

ಇದುವರೆಗೆ ಟಿ20 ಮಾದರಿಯಲ್ಲಿ 11,000ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳು ಕೇವಲ ಮೂವರು ಮಾತ್ರ. ಈ ಬ್ಯಾಟ್ಸ್‌ಮನ್‌ಗಳು ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್, ಪೊಲಾರ್ಡ್​, ಪಾಕಿಸ್ತಾನದ ಶೋಯೆಬ್ ಮಲಿಕ್ ಆಗಿದ್ದಾರೆ. ಈ ಮೂವರು ಇದುವರೆಗೆ ಟಿ20ಯಲ್ಲಿ 11,000ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ

Published On - 6:14 pm, Sun, 18 September 22

Loading...
Unable to load recommendations.
Follow Us