Virat Kohli: ಸಚಿನ್ರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
Virat Kohli Records: ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ವಿಶೇಷ ದಾಖಲೆಯ ಸಮೀಪ ಎಂಬುದು ವಿಶೇಷ.
Updated on: Dec 30, 2023 | 7:56 AM

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 82 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 76 ರನ್ ಬಾರಿಸಿದ್ದರು.

ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ವಿಶೇಷ ದಾಖಲೆಯ ಸಮೀಪ ಎಂಬುದು ವಿಶೇಷ.

ಅಂದರೆ SENA ದೇಶಗಳಲ್ಲಿ (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ಅತೀ ಹೆಚ್ಚು 50+ ಸ್ಕೋರ್ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಪಿಚ್ಗಳಲ್ಲಿ ಸಚಿನ್ ಒಟ್ಟು 74 ಬಾರಿ 50+ ಸ್ಕೋರ್ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಅವರ ಈ ವಿಶೇಷ ದಾಖಲೆಯ ಸನಿಹಕ್ಕೆ ಬಂದಿದ್ದಾರೆ. ಅಂದರೆ ಕಿಂಗ್ ಕೊಹ್ಲಿ SENA ದೇಶಗಳಲ್ಲಿ ಒಟ್ಟು 73 ಬಾರಿ 50+ ಸ್ಕೋರ್ಗಳಿಸಿದ್ದಾರೆ.

ಇದೀಗ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಅವರ ಈ ವಿಶೇಷ ದಾಖಲೆಯ ಸನಿಹಕ್ಕೆ ಬಂದಿದ್ದಾರೆ. ಅಂದರೆ ಕಿಂಗ್ ಕೊಹ್ಲಿ SENA ದೇಶಗಳಲ್ಲಿ ಒಟ್ಟು 73 ಬಾರಿ 50+ ಸ್ಕೋರ್ಗಳಿಸಿದ್ದಾರೆ.

ಅತ್ತ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯದ 2 ಇನಿಂಗ್ಸ್ಗಳಲ್ಲಿ 50+ ಸ್ಕೋರ್ಗಳಿಸಿದರೆ ಸಚಿನ್ ಹೆಸರಿನಲ್ಲಿರುವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.
























