Virat Kohli: 13 ವರ್ಷಗಳಲ್ಲಿ ಇದೇ ಮೊದಲ ಬಾರಿ: ಕಿಂಗ್ ಕೊಹ್ಲಿ ಇಲ್ಲದ ಭಾರತ ತಂಡ
TV9 Web | Updated By: Digi Tech Desk
Updated on:
Feb 14, 2024 | 3:13 PM
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ಗಳು ಈಗಾಗಲೇ ಮುಗಿದಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇದೀಗ ಫೆಬ್ರವರಿ 15 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ.
1 / 6
ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ 3ನೇ ಟೆಸ್ಟ್ ಪಂದ್ಯದ ವೇಳೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.
2 / 6
ಆದರೀಗ ಕೊನೆಯ ಮೂರು ಪಂದ್ಯಗಳಿಂದಲೂ ವಿರಾಟ್ ಕೊಹ್ಲಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾ ಟೆಸ್ಟ್ ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.
3 / 6
ಕಳೆದ 13 ವರ್ಷಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ಟೆಸ್ಟ್ ಸರಣಿ ತಪ್ಪಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಗೆ ಎಂಬುದು ವಿಶೇಷ. ಅಂದರೆ 2011 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ ಆ ಬಳಿಕ ಯಾವತ್ತೂ ಒಮ್ಮೆ ಮಾತ್ರ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದಾದ ಬಳಿಕ ಯಾವುದೇ ಟೆಸ್ಟ್ ಸರಣಿಗೆ ಅಲಭ್ಯರಾಗಿರಲಿಲ್ಲ.
4 / 6
ಇದೀಗ ಇದೇ ಮೊದಲ ಬಾರಿಗೆ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಅದರಂತೆ 13 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಇಲ್ಲದೆ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆಡುತ್ತಿರುವುದು ವಿಶೇಷ.
5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
6 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ. ಇನ್ನು 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿದೆ. ಹಾಗೆಯೇ ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯವು ಧರ್ಮಶಾಲಾದ HPCA ಮೈದಾನದಲ್ಲಿ ನಡೆಯಲಿದೆ.
Published On - 12:08 pm, Sat, 10 February 24