AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಗೆ ಕೇವಲ 24 ಪಂದ್ಯಗಳಲ್ಲಿ ಮಾತ್ರ ಚಾನ್ಸ್​..!

Virat Kohli retires: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2024ರ ಟಿ20 ವಿಶ್ವಕಪ್ ಫೈನಲ್ ಬೆನ್ನಲ್ಲೇ ಚುಟುಕು ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ವಿರಾಟ್ ಕೊಹ್ಲಿ ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದಾಗ್ಯೂ ಮುಂಬರುವ ಏಕದಿನ ವಿಶ್ವಕಪ್​ವರೆಗೆ ಅವರು ಒಡಿಐ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 20, 2025 | 11:51 AM

Share
ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

1 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

2 / 5
ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

3 / 5
ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

4 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

5 / 5

Published On - 11:30 am, Sun, 20 July 25

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?