Virat Kohli: ಟೀಮ್ ಇಂಡಿಯಾದಿಂದ ಹೊರಗುಳಿದು ಜಾಲಿ ಮೂಡ್​ನಲ್ಲಿ ಕೊಹ್ಲಿ ಸುತ್ತಾಟ

| Updated By: ಝಾಹಿರ್ ಯೂಸುಫ್

Updated on: Jul 20, 2022 | 4:48 PM

Team India: ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆ ಪ್ರವಾಸಕ್ಕೂ ತೆರಳಲಿದೆ. 

1 / 5
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್‌ನಿಂದಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲೂ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಸದ್ಯ ಭಾರತ ತಂಡ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದರೆ, ಇತ್ತ ವಿರಾಟ್ ಕೊಹ್ಲಿ ವಿಶ್ರಾಂತಿಯ ಕಾರಣ ತಂಡದಿಂದ ಹೊರಗುಳಿದಿದ್ದಾರೆ.

2 / 5
 ಇಂಗ್ಲೆಂಡ್ ಪ್ರವಾಸದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ಲಂಡನ್‌ನಿಂದ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವಿಚಾರವನ್ನು ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕುವ ಮೂಲಕ ತಿಳಿಸಿದ್ದು, ಹೋಟೆಲ್ ಕೊಠಡಿಯಿಂದ ಚಿತ್ರವನ್ನು ಹಂಚಿಕೊಂಡು 'ಪ್ಯಾರಿಸ್' ನಲ್ಲಿದ್ದೇವೆ ಎಂದು ಬರೆದಿದ್ದಾರೆ.

3 / 5
ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ಪ್ಯಾರಿಸ್‌ನಲ್ಲಿ ಕುಟುಂಬದೊಂದಿಗೆ ಒಂದು ತಿಂಗಳು ಕಳೆಯಲಿದ್ದಾರೆ ಎಂದು ವರದಿಯಾಗಿದೆ. ಕ್ರಿಕೆಟ್‌ನಿಂದ ದೂರ ಉಳಿದು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದಾರೆ. ಅಲ್ಲದೆ ರಿಫ್ರೆಶ್ ಆಗುವ ಮೂಲಕ ಮತ್ತೆ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

4 / 5
ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 70 ಶತಕಗಳನ್ನು ಗಳಿಸಿದ್ದಾರೆ. ಆದರೆ, 2019ರಿಂದ ಇಲ್ಲಿಯವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕ ಸಿಡಿದಿಲ್ಲ. ಹಾಗೆಯೇ ಇಂಗ್ಲೆಂಡ್​ನಲ್ಲೂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕೆಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದರು.

5 / 5
ಇನ್ನು ಈ ವಿಶ್ರಾಂತಿಯ ಬಳಿಕ ವಿರಾಟ್ ಕೊಹ್ಲಿ ಜಿಂಬಾಬ್ವೆ ಸರಣಿ ಅಥವಾ ಏಷ್ಯಾಕಪ್​ ಮೂಲಕ ಕಂಬ್ಯಾಕ್ ಮಾಡಬಹುದು. ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆ ಪ್ರವಾಸಕ್ಕೂ ತೆರಳಲಿದೆ. 

Published On - 2:18 pm, Wed, 20 July 22