AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಕ್ ಬದಲಿಸಿದ ವಿರಾಟ್: ಬದಲಾಗುತ್ತಾ ಕೊಹ್ಲಿಯ ಲಕ್

Virat Kohli: ಪರ್ತ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಆದರೆ ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಕೊಹ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹಾಗೆಯೇ ಬ್ರಿಸ್ಬೇನ್​ ಟೆಸ್ಟ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 21, 2024 | 12:56 PM

Share
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ರಿಸ್ಬೇನ್​ನ ಗಾಬಾದಲ್ಲಿ ನಡೆದ ಮೂರನೇ​​ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತಮ್ಮ ಲುಕ್ ಬದಲಿಸಿದ್ದು, ಇದೀಗ ಹೊಸ ಹೇರ್ ಸ್ಟೈಲ್​ನಲ್ಲಿ ಕಂಗೊಳಿಸಿದ್ದಾರೆ.

1 / 6
ಈ ಬಾರಿ ವಿರಾಟ್ ಕೊಹ್ಲಿಯ ಕೇಶ ವಿನ್ಯಾಸ ಬದಲಿಸಿರುವುದು ಆಸ್ಟ್ರೇಲಿಯಾದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜೋರ್ಡಾನ್ ತಬಕ್‌ಮನ್. ಇದೀಗ ಕಿಂಗ್ ಕೊಹ್ಲಿ ತಲೆಗೆ ಹೊಸ ಟಚ್ ಕೊಟ್ಟಿರುವ ತಬಕ್‌ಮನ್ ಟೀಮ್ ಇಂಡಿಯಾ ಆಟಗಾರನ ನ್ಯೂ ಲುಕ್​ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಈ ಹಿಂದೆ ವಿರಾಟ್ ಕೊಹ್ಲಿ ಭಾರತದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

3 / 6
ಅದರಂತೆ ಡಿಸೆಂಬರ್ 26 ರಿಂದ ಶುರುವಾಗಲಿರುವ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಹೊಸ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಲುಕ್​ನೊಂದಿಗೆ ಕಿಂಗ್ ಕೊಹ್ಲಿಯ ಲಕ್ ಬದಲಾಗಲಿದೆಯಾ ಎಂಬುದೇ ಪ್ರಶ್ನೆ.

4 / 6
ಏಕೆಂದರೆ ಕಳೆದ ಐದು ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 126 ರನ್​ಗಳು. ಇದರಲ್ಲಿ ಒಂದು ಶತಕ ಸೇರಿದೆ. ಈ ಶತಕದ ಬಳಿಕ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದಿರುವ ಸ್ಕೋರ್​ ಕೇವಲ 21 ರನ್​ಗಳು ಮಾತ್ರ. ಹೀಗಾಗಿಯೇ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಅನುಭವಿ ದಾಂಡಿಗ ವಿರಾಟ್ ಕೊಹ್ಲಿ ಅಬ್ಬರಿಸಲೇಬೇಕು.

5 / 6
ಅದರಂತೆ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಲಿದ್ದಾರಾ? ಈ ಮೂಲಕ ಭಾರತ ತಂಡಕ್ಕೆ 2ನೇ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

6 / 6

Published On - 12:54 pm, Sat, 21 December 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!