ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ
Virat Kohli retires: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 2024ರ ಟಿ20 ವಿಶ್ವಕಪ್ ಫೈನಲ್ ಬೆನ್ನಲ್ಲೇ ಚುಟುಕು ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದ ವಿರಾಟ್ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್ಗೂ ಗುಡ್ ಬೈ ಹೇಳಿದ್ದಾರೆ. ಇನ್ನು ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಏಕದಿನ ಕ್ರಿಕೆಟ್ನಲ್ಲಿ ಮಾತ್ರ.
Updated on: May 13, 2025 | 10:05 AM

ಟಿ20 ಮತ್ತು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್ ಬೆನ್ನಲ್ಲೇ ಏಕದಿನ ವಿಶ್ವಕಪ್ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.
