Virat Kohli: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೆರಡು ದಾಖಲೆ ಸೇರ್ಪಡೆ

Virat Kohli's Record: ಟೀಮ್ ಇಂಡಿಯಾ ಪರ 190 ಟೆಸ್ಟ್ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 8836 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 19ನೇ ಸ್ಥಾನದಲ್ಲಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Jan 06, 2024 | 11:22 AM

ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ವಿಶೇಷ ದಾಖಲೆಯೊಂದು ಸೇರ್ಪಡೆಯಾಗಿದೆ.

1 / 6
ಹೌದು, ಟೀಮ್ ಇಂಡಿಯಾ ಪರ ವಿದೇಶದಲ್ಲಿ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 15 ವಿದೇಶಿ ಟೆಸ್ಟ್​ ಗೆಲುವುಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ.

2 / 6
ಸದ್ಯ ಈ ವಿಶೇಷ ದಾಖಲೆ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಕೂಡ ಮೊದಲ ಸ್ಥಾನದಲ್ಲಿದ್ದಾರೆ. ರಹಾನೆ ಕೂಡ 15 ವಿದೇಶಿ ಟೆಸ್ಟ್​ ಗೆಲುವಿನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟಿ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

3 / 6
ಇನ್ನು ಭಾರತದ ಪರ ಅತೀ ಹೆಚ್ಚು ಟೆಸ್ಟ್​ ವಿಜಯಗಳ ಭಾಗವಾಗಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 72 ಟೆಸ್ಟ್ ಗೆಲುವಿನ ಭಾಗವಾಗಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

4 / 6
ಇದೀಗ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಗೆಲುವಿನೊಂದಿಗೆ ಚೇತೇಶ್ವರ ಪೂಜಾರ (58) ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಕಿಂಗ್ ಕೊಹ್ಲಿ 59 ಟೆಸ್ಟ್​ ಪಂದ್ಯಗಳ ಗೆಲುವಿನಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಈ ಮೂಲಕ ಒಂದೇ ಟೆಸ್ಟ್ ಪಂದ್ಯದೊಂದಿಗೆ ವಿರಾಟ್ ಕೊಹ್ಲಿ ಮತ್ತೆರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಟೀಮ್ ಇಂಡಿಯಾ ಪರ 190 ಟೆಸ್ಟ್ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 8836 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಪೇರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 19ನೇ ಸ್ಥಾನದಲ್ಲಿದ್ದಾರೆ.

6 / 6
Follow us