ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ
Virat Kohli Records: ಐಪಿಎಲ್ನ 34ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮತ್ತೆ ಮೂರು ದಾಖಲೆ ನಿರ್ಮಿಸಿದ್ದಾರೆ. ಈ ಮೂರು ದಾಖಲೆಗಳಲ್ಲಿ ಒಂದು ವಿಶ್ವ ದಾಖಲೆ ಎಂಬುದು ವಿಶೇಷ. ಈ ವಿಶ್ವ ದಾಖಲೆ ನಿರ್ಮಿಸಿದ ವಿಶ್ವದ ಏಕೈಕ ಬ್ಯಾಟರ್ ವಿರಾಟ್ ಕೊಹ್ಲಿ ಎಂಬುದು ವಿಶೇಷ.
Updated on: Apr 25, 2026 | 2:09 PM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್ಗಳನ್ನು ಕಲೆಹಾಕುವ ಮೂಲಕ. ಐಪಿಎಲ್ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು.

ಈ 81 ರನ್ಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳು ಸಹ ಮೂಡಿಬಂದಿದ್ದವು. ಈ ಸಿಕ್ಸ್-ಫೋರ್ಗಳೊಂದಿಗೆ ಕಿಂಗ್ ಕೊಹ್ಲಿ ಐಪಿಎಲ್ನಲ್ಲಿ ವಿಶೇಷ ಮೈಲುಗಲ್ಲುಗಳನ್ನು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಬರೆದ ದಾಖಲೆಗಳಾವುವು ಎಂದು ನೋಡುವುದಾದರೆ...

800 ಫೋರ್ಗಳು: ಗುಜರಾತ್ ಟೈಟಾನ್ಸ್ ವಿರುದ್ಧ ಬಾರಿಸಿದ 8 ಫೋರ್ಗಳೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 800 ಫೋರ್ಗಳನ್ನು ಮೈಲುಗಲ್ಲನ್ನು ಮುಟ್ಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 800 ಫೋರ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

300 ಸಿಕ್ಸರ್: ಈ ಪಂದ್ಯದಲ್ಲಿ 4 ಸಿಕ್ಸ್ ಸಿಡಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಒಂದೇ ಫ್ರಾಂಚೈಸಿ ಪರ 300 ಸಿಕ್ಸರ್ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

10000 ರನ್: ಗುಜರಾತ್ ಟೈಟಾನ್ಸ್ ವಿರುದ್ಧದ 81 ರನ್ಗಳೊಂದಿಗೆ ಒಂದೇ ದೇಶದಲ್ಲಿ ಟಿ20 ಕ್ರಿಕೆಟ್ನಲ್ಲಿ 10 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ. ಅಂದರೆ ಕೊಹ್ಲಿ ಭಾರತದಲ್ಲೇ 10 ಸಾವಿರ ರನ್ ಕಲೆಹಾಕಿ ಈ ಸಾಧನೆ ಮಾಡಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.




