ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್ಗಳ ಅಮೋಘ ಗೆಲುವು ಸಾಧಿಸಿದೆ. ಈ ಜಯದೊಂದಿಗೆ 2 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಬ್ಬರು ಆರಂಭಿಕರು ಶತಕ ಬಾರಿಸಿದ್ದು ವಿಶೇಷ.