AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಸ್ ವಿರುದ್ಧದ ಏಕದಿನ ಸರಣಿಗಾಗಿ ಲಾರ್ಡ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ

Virat Kohli Resumes Training at Lord's: ಐಪಿಎಲ್ ನಂತರ ವಿರಾಮ ತೆಗೆದುಕೊಂಡಿದ್ದ ವಿರಾಟ್ ಕೊಹ್ಲಿ, ಲಂಡನ್‌ನ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಅಭ್ಯಾಸ ಆರಂಭಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಸರಣಿಗಾಗಿ ಅವರು ತಯಾರಿ ನಡೆಸುತ್ತಿದ್ದಾರೆ. ಕೊಹ್ಲಿಯ ಬಿಳಿ ಗಡ್ಡದ ಫೋಟೋಗಳು ವೈರಲ್ ಆಗಿದ್ದರೂ, ಬಿಸಿಸಿಐ ಅವರ ಏಕದಿನ ಭವಿಷ್ಯದ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. 2027ರ ಏಕದಿನ ವಿಶ್ವಕಪ್‌ವರೆಗೂ ಅವರು ಆಡುವ ಸಾಧ್ಯತೆ ಇದೆ.

ಪೃಥ್ವಿಶಂಕರ
|

Updated on: Aug 23, 2025 | 9:00 PM

Share
ಐಪಿಎಲ್ ಬಳಿಕ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ಲಂಡನ್​ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಅವರೊಂದಿಗೆ ಲಂಡನ್ ಬೀದಿಯಲ್ಲಿ ಸಾಮಾನ್ಯರಂತೆ ನಡೆದಾಡುವ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು.

1 / 6
ಅಲ್ಲದೆ ಕೆಲವೇ ದಿನಗಳ ಹಿಂದೆ ವಿರಾಟ್ ಕೊಹ್ಲಿಯ ಬಿಳಿ ಗಡ್ಡದ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದನ್ನು ನೋಡಿದ ಅಭಿಮಾನಿಗಳು ಏಕದಿನ ಮಾದರಿಗೂ ಕೊಹ್ಲಿ ವಿದಾಯ ಹೇಳಬಹುದು ಎಂದು ಊಹಿಸಿದ್ದರು. ಆದರೆ ಅಂತಹ ಊಹಾಪೋಹಗಳಿಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತೆರೆ ಎಳಿದಿದ್ದರು.

2 / 6
ಇದೀಗ ಅಭಿಮಾನಿಗಳು ಸಂತಸ ಪಡುವ ಮಾಹಿತಿಯೊಂದು ಲಂಡನ್​ನಿಂದ ಹೊರಬಿದ್ದಿದ್ದು, ಮುಂಬರುವ ಏಕದಿನ ಸರಣಿಗಾಗಿ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಹೀಗಾಗಿ ಈ ಸರಣಿಗಾಗಿ ವಿರಾಟ್ ಕೊಹ್ಲಿ ಐತಿಹಾಸಿಕ ಲಾರ್ಡ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

3 / 6
ಆಟದಿಂದ ದೂರವಿದ್ದರೂ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧರಾಗುತ್ತಿದ್ದಾರೆ ಮತ್ತು ಅಭ್ಯಾಸದತ್ತ ಗಮನ ಹರಿಸುತ್ತಿದ್ದಾರೆ. ಲಾರ್ಡ್ಸ್‌ನಲ್ಲಿ ಅಭ್ಯಾಸ ಮಾಡಿದ ನಂತರ, ಅವರು ಅಭಿಮಾನಿಗಳನ್ನು ಭೇಟಿ ಮಾಡಿ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

4 / 6
ಆಗಸ್ಟ್‌ನಲ್ಲಿ ಪ್ರಸ್ತಾವಿತ ಬಾಂಗ್ಲಾದೇಶ ಪ್ರವಾಸ ರದ್ದಾದ ನಂತರ, ಭಾರತದ ಮುಂದಿನ ಏಕದಿನ ಪಂದ್ಯ ಅಕ್ಟೋಬರ್ 19 ರಿಂದ 25 ರವರೆಗೆ ನಡೆಯಲಿರುವ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಆದಾಗ್ಯೂ, ರೋಹಿತ್ ಮತ್ತು ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ.

5 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಪರ್ತ್‌ನಲ್ಲಿ ಆರಂಭವಾಗಲಿದೆ. ಭಾರತದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯದ ಬಗ್ಗೆ ಊಹಾಪೋಹಗಳ ನಡುವೆ, ಬಿಸಿಸಿಐ ಈ ಇಬ್ಬರ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಆತುರಪಡುತ್ತಿಲ್ಲ ಎಂದು ಹೇಳಿದೆ. ಹೀಗಾಗಿ ಇವರಿಬ್ಬರು 2027 ರ ಏಕದಿನ ವಿಶ್ವಕಪ್ ಆಡಬಹುದು ಎಂದು ಊಹಿಸಲಾಗಿದೆ.

6 / 6
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟಿ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು