ಇನ್ನು ರೋಹಿತ್ ಬಗ್ಗೆ ಮೆಚ್ಚುಗೆಯ ಮಾತನಾಡಿದ ಸೆಹ್ವಾಗ್, ‘ವಿಶ್ವಕಪ್ ಬಂದಾಗ, ರೋಹಿತ್ ಅವರ ಶಕ್ತಿಯ ಮಟ್ಟ, ಅವರ ಪ್ರದರ್ಶನ ಹೆಚ್ಚಾಗುತ್ತದೆ. ಆದ್ದರಿಂದ, ಈ ವಿಶ್ವಕಪ್‌ನಲ್ಲಿ ರೋಹಿತ್ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ನನಗೆ ಖಚಿತವಾಗಿದೆ. ಅಲ್ಲದೆ ಈ ಬಾರಿ ಅವರೇ ತಂಡದ ನಾಯಕರಾಗಿರುವುದರಿಂದ ತಂಡಕ್ಕೆ ಪ್ರಮುಖ ಕೊಡುಗೆ ನೀಡಲಿದ್ದು, ಸಾಕಷ್ಟು ರನ್ ಗಳಿಸುತ್ತಾರೆ ಎಂದು ನನಗೆ ಖಾತ್ರಿಯಿದೆ’ ಎಂದು ಸೆಹ್ವಾಗ್ ಹೇಳಿದ್ದಾರೆ.