ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ವೀರೇಂದ್ರ ಸೆಹ್ವಾಗ್

Edited By:

Updated on: Jun 05, 2023 | 2:12 PM

Virender Sehwag: ಸೆಹ್ವಾಗ್ ಈ ರೀತಿಯಾಗಿ ಮಾನವೀಯತೆ ಮೆರೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

1 / 7
ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ.

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ.

2 / 7

ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಬೋರ್ಡಿಂಗ್​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

3 / 7

ಸೆಹ್ವಾಗ್ ಈ ರೀತಿಯಾಗಿ ಮಾನವೀಯತೆ ಮೆರೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದೀಗ ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

4 / 7

ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್- ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್- ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ಈ ಹಿಂದೆ ಸೆಹ್ವಾಗ್ ತಿಳಿಸಿದ್ದರು.

5 / 7

ಇದೀಗ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್ ಸ್ಕೂಲ್‌ ಮೂಲಕ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಸೌಲಭ್ಯ ಕಲ್ಪಿಸುವುದಾಗಿ ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

6 / 7

ವೀರೇಂದ್ರ ಸೆಹ್ವಾಗ್ ಅವರ ಈ ಮಾನವೀಯ ನಡೆಗೆ ಇದೀಗ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಣದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರನಿಗಿರುವ ಕಾಳಜಿಯನ್ನು ಹಲವರು ಪ್ರಶಂಸಿದ್ದಾರೆ.

7 / 7

ಇನ್ನು ಒಡಿಶಾ ರೈಲು ದುರಂತದಲ್ಲಿ 275 ಮಂದಿ ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾಗಿದ್ದು, ಈ ಅಪಘಾತದಲ್ಲಿ ಮೃತಪಟ್ಟವರಿಗೆ ಕೇಂದ್ರ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

Published On - 11:07 pm, Sun, 4 June 23

Loading...
Unable to load recommendations.
Follow Us