Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್

| Updated By: ಝಾಹಿರ್ ಯೂಸುಫ್

Updated on: Feb 14, 2023 | 9:23 PM

Virender Sehwag: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದರು.

1 / 7
ಫೆಬ್ರವರಿ 14, 2019...ಇಡೀ ವಿಶ್ವವೇ ವ್ಯಾಲೆಂಟೈನ್ಸ್ ಡೇ ಸಂಭ್ರಮದಲ್ಲಿದ್ದಾಗ ಇತ್ತ ಭಾರತದಲ್ಲಿ ಉಗ್ರರು ಭೀಕರ ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಈ ಉಗ್ರರ ಬಾಂಬ್ ಸ್ಪೋಟದಲ್ಲಿ ಒಟ್ಟು 40 ಯೋಧರು ಹುತಾತ್ಮರಾಗಿದ್ದರು. ಈ ಭೀಕರ ಹತ್ಯಾಕಾಂಡದ ಬೆನ್ನಲ್ಲೇ ಇಡೀ ದೇಶವೇ ಶೋಕದಲ್ಲಿ ಮುಳುಗಿತ್ತು.

2 / 7
ಈ ದುರಂತದ ಬೆನ್ನಲ್ಲೇ ಇಡೀ ದೇಶವೇ ಸೈನಿಕರ ಬೆಂಬಲಕ್ಕೆ ನಿಂತಿತು. ಅದರಲ್ಲೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಬಳಿಕ ಯಾವುದೇ ಅಪ್​ಡೇಟ್ ನೀಡಿರಲಿಲ್ಲ. ಇದೀಗ ಅಂದು ಕೊಟ್ಟ ಮಾತನ್ನು ವೀರು ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

3 / 7
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಇಬ್ಬರು ಸೈನಿಕರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸೆಹ್ವಾಗ್ ವಹಿಸಿಕೊಂಡಿದ್ದಾರೆ. ಹರಿಯಾಣದ ತಮ್ಮ ಶಾಲೆಯಲ್ಲಿ ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಕೆಟ್ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ.

4 / 7
ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ರಾಮ್ ವಕೀಲ್ ಅವರ ಪುತ್ರ ಅರ್ಪಿತ್ ಸಿಂಗ್ ಮತ್ತು ವಿಜಯ್ ಅವರ ಪುತ್ರ ರಾಹುಲ್ ಸೊರೆಂಗ್ ಪ್ರಸ್ತುತ ಹರಿಯಾಣದ ಸೆಹ್ವಾಗ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಮಕ್ಕಳ ಫೋಟೋವನ್ನು ವೀರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

5 / 7
ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮಕ್ಕಳ ಜೀವನದಲ್ಲಿ ಸಣ್ಣ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾಗಿರುವುದು ಬಹಳ ಸೌಭಾಗ್ಯ. ಅರ್ಪಿತ್ ಸಿಂಗ್ s/o ಶಹೀದ್ ರಾಮ್ ವಕೀಲ್ ಮತ್ತು ರಾಹುಲ್ ಸೊರೆಂಗ್ s/o ಶಹೀದ್ ವಿಜಯ್ ಸೊರೆಂಗ್ ಅವರ ಶಿಕ್ಷಣದ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

6 / 7
ಇದೀಗ ವೀರೇಂದ್ರ ಸೆಹ್ವಾಗ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

7 / 7
ಅಲ್ಲದೆ ಅಮರ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ಸೆಹ್ವಾಗ್​ಗೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.