AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd ODI: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನಕ್ಕೂ ಮುನ್ನ ಆಘಾತ: ಪಂದ್ಯ ನಡೆಯುವುದು ಅನುಮಾನ

Visakhapatnam Weather Report: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ದ್ವಿತೀಯ ಏಕದಿನ ಪಂದ್ಯ ಆಯೋಜಿಸಲಾಗಿದೆ. ಅನೇಕ ಕಾರಣಗಳಿಗೆ ಇಂದಿನ ಪಂದ್ಯ ಕುತೂಹಲ ಕೆರಳಿಸಿದೆ. ಆದರೆ, ಈ ದ್ವಿತೀಯ ಏಕದಿನ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ.

Vinay Bhat
|

Updated on: Mar 19, 2023 | 10:24 AM

Share
ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಕರ ರೆಡ್ಡಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ದ್ವಿತೀಯ ಏಕದಿನ ಪಂದ್ಯ ಆಯೋಜಿಸಲಾಗಿದೆ. ಟೀಮ್ ಇಂಡಿಯಾ ಈ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅತ್ತ ಕಾಂಗರೂ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

1 / 8
ಈ ಪಂದ್ಯದ ಮೂಲಕ ರೋಹಿತ್ ಶರ್ಮಾ ಕೂಡ ತಂಡಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ. ಹೀಗೆ ಅನೇಕ ಕಾರಣಗಳಿಗೆ ಇಂಡೋ-ಆಸೀಸ್ ಎರಡನೇ ಏಕದಿನ ಕುತೂಹಲ ಕೆರಳಿಸಿದೆ. ಆದರೆ, ಈ ದ್ವಿತೀಯ ಏಕದಿನ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ.

2 / 8
ವಿಶಾಖಪಟ್ಟಣಂನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಶನಿವಾರ ಕೂಡ ಮಳೆಯಾಗಿದ್ದು ಪಿಚ್‌ ಅನ್ನು ಮುಚ್ಚಲಾಗಿತ್ತು. ಇಂದು ಪಂದ್ಯದ ದಿನ ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 31 ರಿಂದ 51 ಪ್ರತಿಶತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಸಂಜೆ 5 ಗಂಟೆಗೆ ಜೋರಾಗಿ ಮಳೆ ಸುರಿಯಲಿದೆಯಂತೆ.

3 / 8
ಆಕ್ಯುವೆದರ್ ಪ್ರಕಾರ, ವಿಶಾಖಪಟ್ಟಣದಲ್ಲಿ ದಿನದ ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ. ಬೆಳಗ್ಗೆ ಗುಡುಗು ಸಹಿತ ಮಳೆಯಾಗಲಿದೆ. ಮಧ್ಯಾಹ್ನ ಕೆಲ ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಸಂಜೆಯ ವೇಳೆಗೆ ಸುಮಾರು 24 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ಅಂದಾಜಿಸಲಾಗಿದೆ. ಹೀಗಾಗಿ ಸಂಪೂರ್ಣ ಪಂದ್ಯ ನಡೆಯುವುದು ಅನುಮಾನ ಎಂದು ಹೇಳಲಾಗಿದೆ.

4 / 8
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವಶಪಡಿಸಿಕೊಂಡ ಬಳಿಕ ಭಾರತ ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್​ಗಳ ಜಯ ಸಾಧಿಸಿ 1-0 ಮುನ್ನಡೆ ಸಾಧಿಸಿದೆ. ಕೆಎಲ್ ರಾಹುಲ್ ಫಾರ್ಮ್​ಗೆ ಬಂದಿರುವುದು ಮತ್ತು ರೋಹಿತ್ ಕಮ್​ಬ್ಯಾಕ್ ಮಾಡಿರುವುದು ಪ್ಲಸ್ ಪಾಯಿಂಟ್ ಆಗಿದೆ.

5 / 8
ಹಿಟ್​ಮ್ಯಾನ್ ಆಗಮನ ಆಗಿರುವ ಕಾರಣ ತಂಡದಲ್ಲಿ ಒಂದು ಬದಲಾವಣೆ ಖಚಿತವಾಗಿದೆ. ಕೆಎಲ್ ರಾಹುಲ್ ಅದ್ಭುತ ಫಾರ್ಮ್​ಗೆ ಬಂದಿರುವ ಕಾರಣ ಇವರನ್ನು ಹೊರಗಿಡುವುದು ಅನುಮಾನ. ಇವರ ಬದಲು ಮೊದಲ ಪಂದ್ಯದಲ್ಲಿ 3 ರನ್​ಗೆ ಔಟಾಗಿ ವೈಫಲ್ಯ ಅನುಭವಿಸಿದ ಇಶಾನ್ ಕಿಶನ್ ಬೆಂಚ್ ಕಾಯಬೇಕಾಗಬಹುದು.

6 / 8
ಇತ್ತ ಆಸ್ಟ್ರೇಲಿಯಾ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಆಗಿರುವುದರಿಂದ ದೊಡ್ಡ ಯೋಜನೆಯೊಂದಿಗೆ ಕಣಕ್ಕಿಳಿಯಬೇಕು. ಮಿಚೆಲ್ ಮಾರ್ಷ್ ಉತ್ತಮ ಲಯದಲ್ಲಿದ್ದಾರೆ ಬಿಟ್ಟರೆ ಉಳಿದವರು ಫಾರ್ಮ್ ಕಂಡುಕೊಳ್ಳಬೇಕಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿದೆ.

8 / 8
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ