AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishmi Gunaratne: ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ವಿಶ್ಮಿ

Vishmi Gunaratne: ಶ್ರೀಲಂಕಾ ಪರ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಚಾಮರಿ ಅಥಾಪತ್ತು ಮಾತ್ರ ಶತಕ ಸಿಡಿಸಿದ್ದರು. ಒಟ್ಟು 9 ಸೆಂಚುರಿಗಳನ್ನು ಬಾರಿಸುವ ಮೂಲಕ ಚಾಮರಿ ಹೊಸ ಇತಿಹಾಸ ನಿರ್ಮಿಸಿದ್ದರು. ಇದೀಗ ಲಂಕಾ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 2ನೇ ಆಟಗಾರ್ತಿಯಾಗಿ ವಿಶ್ಮಿ ಗುಣರತ್ನೆ ಹೊರಹೊಮ್ಮಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 17, 2024 | 2:34 PM

Share
ಶ್ರೀಲಂಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ವಿಶ್ಮಿ ಗುಣರತ್ನೆ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ 18ನೇ ವಯಸ್ಸಿನಲ್ಲಿ ಶ್ರೀಲಕಾ ಬ್ಯಾಟ್ಸ್​ಮನ್​ಗಳ ಸೆಂಚುರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಬೆಲ್‌ಫಾಸ್ಟ್​ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಲಂಕಾ ಪರ ಆರಂಭಿಕಳಾಗಿ ಕಣಕ್ಕಿಳಿದ ವಿಶ್ಮಿ ಗುಣರತ್ನೆ 98 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 101 ರನ್​ ಬಾರಿಸಿದ್ದರು. ಈ ಶತಕದೊಂದಿಗೆ ಶ್ರೀಲಂಕಾ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2 / 6
ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಶ್ರೀಲಂಕಾ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಚಮಣಿ ಸೆನೆವಿರತ್ನ ಹೆಸರಿನಲ್ಲಿತ್ತು. 1998 ರಲ್ಲಿ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 19 ವರ್ಷ, 154 ದಿನಗಳ ವಯಸ್ಸಿನ ಚಮಣಿ ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವಿಶ್ಮಿ ಗುಣರತ್ನೆ ಯಶಸ್ವಿಯಾಗಿದ್ದಾರೆ. 18 ವರ್ಷದ (360 ದಿನಗಳು) ವಿಶ್ಮಿ ಐರ್ಲೆಂಡ್ ವಿರುದ್ಧ ಸೆಂಚುರಿ ಪೂರೈಸುವುದರೊಂದಿಗೆ ಶ್ರೀಲಂಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೀಮಿತ ಓವರ್​ ಪಂದ್ಯದಲ್ಲಿ ಲಂಕಾ ಪರ ಸೆಂಚುರಿ ಸಿಡಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಶ್ರೀಲಂಕಾ ಪರ ಪುರುಷರ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ ಅಸಂಕಾ ಗುರುಸಿನ್ಹ ಹೆಸರಿನಲ್ಲಿದೆ. 1986ರಲ್ಲಿ ಕೊಲಂಬೊದಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಮೂರನೇ ಟೆಸ್ಟ್ ​ಪಂದ್ಯದಲ್ಲಿ ಅಸಂಕಾ ಅಜೇಯ 116 ರನ್ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 19 ವರ್ಷ, 187 ದಿನಗಳು.

5 / 6
ಇದೀಗ ಮಹಿಳಾ/ಪುರುಷರ ಕ್ರಿಕೆಟ್​ನಲ್ಲಿ ಶ್ರೀಲಂಕಾ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿಶ್ಮಿ ಗುಣರತ್ನೆ ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಲಂಕಾ ಕ್ರಿಕೆಟ್​ನಲ್ಲಿ ಯುವ ಆಟಗಾರ್ತಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

6 / 6
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ