- Kannada News Photo gallery Cricket photos Wanindu Hasaranga and Virat Kohli Practicing in Chinnaswami for RCB vs DC IPL 2023 Match Kannada News
RCB vs DC, IPL 2023: ನಾಳೆ ಆರ್‌ಸಿಬಿ ಪಂದ್ಯ: ಚಿನ್ನಸ್ವಾಮಿಯಲ್ಲಿ ಕೊಹ್ಲಿ, ವನಿಂದು ಹಸರಂಗ ಭರ್ಜರಿ ಅಭ್ಯಾಸ
Wanindu Hasaranga: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.
Updated on: Apr 14, 2023 | 9:59 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಇಂದು ಕೋಲ್ಕತ್ತಾ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗುತ್ತಿದೆ. ನಾಳೆ (ಏ. 14) ಐಪಿಎಲ್‌ನಲ್ಲಿ ಬಹುನಿರೀಕ್ಷಿತ ಪಂದ್ಯ ಆಯೋಜಿಸಲಾಗಿದೆ.

ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

ಡೆಲ್ಲಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಆರ್‌ಸಿಬಿ ಭರ್ಜರಿ ತಯಾರಿ ನಡೆಸುತ್ತಿದೆ. ಚಿನ್ನಸ್ವಾಮಿಯಲ್ಲಿ ಫಾಫ್ ಪಡೆ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಆರ್‌ಸಿಬಿ ತಂಡ ಸೇರಿಕೊಂಡಿದ್ದು ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಐಪಿಎಲ್‌ನಲ್ಲಿ ಮೊದಲ ಮೂರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

ಚಿನ್ನಸ್ವಾಮಿಯಲ್ಲಿ ವನಿಂದು ಹಸರಂಗ ಭರ್ಜರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

ವಿರಾಟ್ ಕೊಹ್ಲಿ ಕೂಡ ನೆಟ್ನಲ್ಲಿ ಬೆವರು ಹರಿಸಿದರು.

ಇನ್ನು ಪ್ರತಿ ಬಾರಿಯಂತೆ ಈ ಸಲವೂ ಆರ್‌ಸಿಬಿ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ನೀಡುತ್ತಿದೆ. ಅದರಂತೆ ಹಸಿರು ಜೆರ್ಸಿಯಲ್ಲಿ ಒಂದು ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಆರ್‌ಸಿಬಿ ಏಪ್ರಿಲ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಆರ್‌ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆಯೇ ದೊಡ್ಡ ಸಮಸ್ಯೆಯಾಗಿದೆ.



















