AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಎಸೆತವನ್ನು ಎದುರಿಸದೇ ಫೈನಲ್​ಗೆ ಪ್ರವೇಶಿಸಿದ ವಾಷಿಂಗ್ಟನ್ ಫ್ರೀಡಂ

Major League Cricket 2025: ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ ಫೈನಲ್​ಗೆ ಗ್ಲೆನ್ ಮ್ಯಾಕ್ಸ್​ವೆಲ್​ ನೇತೃತ್ವದ ವಾಷಿಂಗ್ಟನ್ ಫ್ರೀಡಂ ತಂಡ ಎಂಟ್ರಿ ಕೊಟ್ಟಿದೆ. ಈ ಟೂರ್ನಿಯ ಪ್ಲೇಆಫ್ ಪಂದ್ಯಗಳಿಗೆ ಮೀಸಲು ದಿನ ನಿಗದಿ ಮಾಡಲಾಗಿಲ್ಲ. ಇದು ವಾಷಿಂಗ್ಟನ್ ಫ್ರೀಡಂ ತಂಡದ ಪಾಲಿಗೆ ವರದಾನವಾಗಿ ಪರಿಣಮಿಸಿತು.

ಝಾಹಿರ್ ಯೂಸುಫ್
|

Updated on: Jul 09, 2025 | 9:03 AM

Share
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಹಾಗೂ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಟಾಸ್ ಪ್ರಕ್ರಿಯೆಯ ಬೆನ್ನಲ್ಲೇ ಸುರಿದ ಭಾರೀ ಮಳೆಯಿಂದಾಗಿ ಗ್ರ್ಯಾಂಡ್ ಪ್ರೈರಿ ಮೈದಾನವು ಸಂಪೂರ್ಣ ಒದ್ದೆಯಾಗಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅತ್ತ ಪಂದ್ಯ ರದ್ದಾಗಿದ್ದರಿಂದ ಲೀಗ್ ಹಂತದ ಮ್ಯಾಚ್​ಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಾಷಿಂಗ್ಟನ್ ಫ್ರೀಡಂ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

2 / 5
ಇನ್ನು ಫಾಫ್ ಡುಪ್ಲೆಸಿಸ್ ನೇತೃತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಬೇಕಿದೆ. ಈ ಪಂದ್ಯವು ಜುಲೈ 11 ರಂದು ನಡೆಯಲಿದೆ. ಈ ನಿರ್ಣಾಯಕ ಮ್ಯಾಚ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್ ಅಥವಾ ಎಂಐ ನ್ಯೂಯಾರ್ಕ್​ ತಂಡವನ್ನು ಎದುರಿಸಲಿದೆ.

3 / 5
ಸಿಯಾಟಲ್ ಓರ್ಕಾಸ್ ಹಾಗೂ ಎಂಐ ನ್ಯೂಯಾರ್ಕ್​ ತಂಡಗಳು ನಾಳೆ (ಜುಲೈ 10) ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಹಾಗೆಯೇ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.

4 / 5
ಇನ್ನು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವು ಜುಲೈ 13 ರಂದು ಭಾನುವಾರ ನಡೆಯಲಿದ್ದು, ಈ ಪಂದ್ಯಕ್ಕೂ ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಅಂತಿಮ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ವಿರುದ್ಧ ಕಣಕ್ಕಿಳಿಯುವ ತಂಡ ಯಾವುದೆಂಬುದು ಜುಲೈ 11 ರಂದು ನಿರ್ಧಾರವಾಗಲಿದೆ.

5 / 5
Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು

‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’