AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2025: ದಾಖಲೆಯ ರನ್ ಚೇಸ್… ಹೊಸ ಚರಿತ್ರೆ ಬರೆದ ವಾಷಿಂಗ್ಟನ್ ಫ್ರೀಡಂ

Washington Freedom vs Texas Super Kings: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 13ನೇ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ವಾಷಿಂಗ್ಟನ್ ಫ್ರೀಡಂ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ 220 ರನ್ ಕಲೆಹಾಕಿದರೆ, ಈ ಗುರಿಯನ್ನು ವಾಷಿಂಗ್ಟನ್ ಫ್ರೀಡಂ ತಂಡವು 19.4 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Jun 23, 2025 | 10:32 AM

Share
ಮೇಜರ್ ಲೀಗ್​ ಕ್ರಿಕೆಟ್​ (MLC 2025) ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ತಂಡವು ಭರ್ಜರಿ ದಾಖಲೆ ಬರೆದಿದೆ. ಅದು ಕೂಡ ಬರೋಬ್ಬರಿ 221 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತುವ ಮೂಲಕ ಎಂಬುದು ವಿಶೇಷ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ವಾಷಿಂಗ್ಟನ್ ಫ್ರೀಡಂ ತಂಡಗಳು ಕಣಕ್ಕಿಳಿದಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ಪರ ಆರಂಭಿಕ ದಾಂಡಿಗ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 31 ಎಸೆತಗಳನ್ನು ಎದುರಿಸಿದ ಫಾಫ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 69 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು.

2 / 6
ಈ ಕಠಿಣ ಗುರಿ ಬೆನ್ನತ್ತಿದ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ಮಿಚೆಲ್ ಓವನ್ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಓವನ್ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಆಸೀಸ್ ದಾಂಡಿಗನ ಬ್ಯಾಟ್​ನಿಂದ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 89 ರನ್ ಮೂಡಿಬಂತು.

3 / 6
ಮತ್ತೊಂದೆಡೆ ಮಿಚೆಲ್ ಓವನ್​ಗೆ ಉತ್ತಮ ಸಾಥ್ ನೀಡಿದ ಆಂಡ್ರೀಸ್ ಗೌಸ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟೆಕ್ಸಾಸ್ ಸೂಪರ್ ಕಿಂಗ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಗೌಸ್ 45 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 80 ರನ್ ಕಲೆಹಾಕಿದರು. ಈ ಮೂಲಕ ವಾಷಿಂಗ್ಟನ್ ಫ್ರೀಡಂ ತಂಡವು 19.4 ಓವರ್​ಗಳಲ್ಲಿ 223 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

4 / 6
ಇದರೊಂದಿಗೆ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ಚೇಸ್ ಮಾಡಿ ಗೆದ್ದ ದಾಖಲೆ ಕೂಡ ವಾಷಿಂಗ್ಟನ್ ಫ್ರೀಡಂ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಎಂಐ ನ್ಯೂಯಾರ್ಕ್ ತಂಡದ ಹೆಸರಿನಲ್ಲಿತ್ತು. ನಿಕೋಲಸ್ ಪೂರನ್ ಮುಂದಾಳತ್ವದ ಎಂಐ ನ್ಯೂಯಾರ್ಕ್​ ತಂಡವು ಸಿಯಾಟಲ್ ಓರ್ಕಾಸ್ ವಿರುದ್ಧ 203 ರನ್​ಗಳನ್ನು ಚೇಸ್ ಮಾಡಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಟೆಕ್ಸಾಸ್ ಸೂಪರ್ ಕಿಂಗ್ಸ್ ನೀಡಿದ 221 ರನ್​ಗಳನ್ನು ಬೆನ್ನತ್ತಿದ ಗ್ಲೆನ್ ಮ್ಯಾಕ್ಸ್​ವೆಲ್ ಸಾರಥ್ಯದ ವಾಷಿಂಗ್ಟನ್ ಫ್ರೀಡಂ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಚೇಸ್ ಮಾಡಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಹೆಸರಿನಲ್ಲಿದೆ. 2024 ರ ಐಪಿಎಲ್​ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 262 ರನ್​ಗಳನ್ನು ಬೆನ್ನತ್ತಿ ಪಂಜಾಬ್ ಕಿಂಗ್ಸ್ ತಂಡವು ಈ ವಿಶ್ವ ದಾಖಲೆ ನಿರ್ಮಿಸಿದೆ.

6 / 6