AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಚೊಚ್ಚಲ ಶತಕ ಬಾರಿಸಿ ತಂಡವನ್ನು ಸೋಲಿನಿಂದ ಪಾರು ಮಾಡಿದ ಸುಂದರ್

Washington Sundar's Maiden Test Century: ಮ್ಯಾಂಚೆಸ್ಟರ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ ಡ್ರಾ ಮಾಡುವಲ್ಲಿ ಯಶಸ್ವಿಯಾಗಿದೆ. ವಾಷಿಂಗ್ಟನ್ ಸುಂದರ್ ಅವರ ಅದ್ಭುತ ಅಜೇಯ ಶತಕ ಮತ್ತು ಜಡೇಜಾರೊಂದಿಗಿನ ಅಜೇಯ ಜೊತೆಯಾಟ ಇದಕ್ಕೆ ಪ್ರಮುಖ ಕಾರಣ. ಇದು ಸುಂದರ್‌ರ ಅವರ ವೃತ್ತಿಜೀವನದ ಚೊಚ್ಚಲ ಶತಕವಾಗಿದೆ.

ಪೃಥ್ವಿಶಂಕರ
|

Updated on: Jul 27, 2025 | 11:00 PM

Share
ಮ್ಯಾಂಚೆಸ್ಟರ್ ಟೆಸ್ಟ್‌ ಪಂದ್ಯವನ್ನು ಡ್ರಾದಲ್ಲಿ ಕೊನೆಗೊಳಿಸುವಲ್ಲಿ ಟೀಂ ಇಂಡಿಯಾ ಕೊನೆಗೂ ಯಶಸ್ವಿಯಾಗಿದೆ. ತಂಡವನ್ನು ಸೋಲಿನಿಂದ ಪಾರು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೌಲಿಂಗ್​​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​​ನಲ್ಲೂ ಸ್ಮರಣಿಯ ಶತಕ ಸಿಡಿಸಿ ತಂಡವನ್ನು ಸೋಲಿನ ದವಡೆಯಿಂದ ಹೊರ ತಂದರು.

1 / 6
ರವೀಂದ್ರ ಜಡೇಜಾ ಅವರೊಂದಿಗೆ 200 ಕ್ಕೂ ಹೆಚ್ಚು ರನ್​ಗಳ ಅಜೇಯ ಜೊತೆಯಾಟ ಕಟ್ಟಿದ ಸುಂದರ್, ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಬಾರಿಸುವಲ್ಲಿಯೂ ಯಶಸ್ವಿಯಾದರು. ಈ ಶತಕವು ಅವರ ವೃತ್ತಿಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮಾತ್ರವಲ್ಲದೆ , ಭಾರತೀಯ ತಂಡಕ್ಕೆ ಒಂದು ಮಹತ್ವದ ತಿರುವು ಎಂದು ಸಾಬೀತಾಯಿತು.

2 / 6
ಎರಡನೇ ಇನ್ನಿಂಗ್ಸ್‌ನಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಬದಲಿಗೆ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಾಷಿಂಗ್ಟನ್ ಸುಂದರ್, ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು ಸ್ಮರಣೀಯ ಇನ್ನಿಂಗ್ಸ್ ಆಡಿದರು. ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್‌ಗೆ ಬಂದಾಗ, ಟೀಂ ಇಂಡಿಯಾ 188 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

3 / 6
ಇದರ ನಂತರ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಕಟ್ಟಿದ ಸುಂದರ್, 34 ರನ್​ಗಳ ಜೊತೆಯಾಟ ಕಟ್ಟಿದರು. ಆದರೆ ಈ ವೇಳೆ ಗಿಲ್ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದು ಬಿತ್ತು. ಆ  ನಂತರ ಸುಂದರ್, ರವೀಂದ್ರ ಜಡೇಜಾ ಅವರೊಂದಿಗೆ ಸ್ಮರಣೀಯ ಪಾಲುದಾರಿಕೆಯನ್ನು ಹಂಚಿಕೊಂಡರು.

4 / 6
ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 206 ಎಸೆತಗಳನ್ನು ಎದುರಿಸಿ ಅಜೇಯ 101 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. 2021 ರಲ್ಲಿ ಟೆಸ್ಟ್ ವೃತ್ತಿಜೀವನ ಪ್ರಾರಂಭಿಸಿದ ವಾಷಿಂಗ್ಟನ್ ಸುಂದರ್ ತಮ್ಮ ಮೊದಲ ಅಂತರರಾಷ್ಟ್ರೀಯ ಶತಕಕ್ಕಾಗಿ 4 ವರ್ಷ ಕಾಯಬೇಕಾಯಿತು.

5 / 6
ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ರವೀಂದ್ರ ಜಡೇಜಾ 334 ಎಸೆತಗಳನ್ನು ಆಡಿ ಅಜೇಯ 203 ರನ್‌ಗಳನ್ನು ಸೇರಿಸಿದರು. ವಿಶೇಷವೆಂದರೆ ಇಬ್ಬರೂ ಆಟಗಾರರು 2 ಸೆಷನ್‌ಗಳಿಗಿಂತ ಹೆಚ್ಚು ಕಾಲ ಬ್ಯಾಟಿಂಗ್ ಮಾಡಿದರು. ಅದೇ ಸಮಯದಲ್ಲಿ, ವಾಷಿಂಗ್ಟನ್ ಸುಂದರ್ ಸೆನಾ ದೇಶದಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ಗಳಿಸಿದ 26 ನೇ ಭಾರತೀಯರಾದರು . ಇದಲ್ಲದೆ, ಅವರು ಭಾರತದ ಪರ ಟೆಸ್ಟ್‌ನಲ್ಲಿ ಶತಕ ಗಳಿಸಿದ 70 ನೇ ಆಟಗಾರ ಎನಿಸಿಕೊಂಡರು.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ