AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೊನೆಯ ಪಂದ್ಯದಿಂದ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಔಟ್

Washington Sundar injury: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ಪ್ರಮುಖ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಎರಡನೇ ಪಂದ್ಯದಲ್ಲಿ ಗಾಯಗೊಂಡಿದ್ದು, ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಗಾಯ ಗಂಭೀರವಾಗಿದ್ದು, ಜುಲೈ 19 ರಂದು ನಡೆಯುವ ನಿರ್ಣಾಯಕ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ. ಸುಂದರ್ ಅನುಪಸ್ಥಿತಿ ಟೀಂ ಇಂಡಿಯಾದ ಬೌಲಿಂಗ್ ಮತ್ತು ಬ್ಯಾಟಿಂಗ್ ಸಮತೋಲನಕ್ಕೆ ದೊಡ್ಡ ಹೊಡೆತವಾಗಿದೆ, ಅವರ ಬದಲಿ ಆಟಗಾರ ಯಾರು ಎಂಬುದು ಕಾದುನೋಡಬೇಕಿದೆ.

ಪೃಥ್ವಿಶಂಕರ
|

Updated on: Jul 17, 2026 | 5:38 PM

Share
ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ(PC-PTI).

1 / 5
ಜುಲೈ 16, ಗುರುವಾರ ಕಾರ್ಡಿಫ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಸುಂದರ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡರು. ವಿರಾಟ್ ಕೊಹ್ಲಿ ಔಟಾದ ನಂತರ ಬ್ಯಾಟಿಂಗ್‌ ಮಾಡಲು ಬಂದ ಸುಂದರ್ ಓಡುವಾಗ ಕಾಲಿನ ನೋವಿಗೆ ತುತ್ತಾದರು. ಕೂಡಲೇ ಮೈದಾನಕ್ಕೆ ಬಂದ ಫಿಸಿಯೋ ಸುಂದರ್‌ ಅವರ ಕಾಲಿಗೆ ಬ್ಯಾಂಡೇಜ್ ಮಾಡಿದರು(PC-PTI).

2 / 5
ಆದರೆ ಚಿಕಿತ್ಸೆಯ ಬಳಿಕವೂ ಸುಂದರ್ ಅವರ ನೋವು ಕಡಿಮೆ ಆಗಲಿಲ್ಲ. ಇದು ಸುಂದರ್ ಅವರ ಬ್ಯಾಟಿಂಗ್‌ ಮೇಲೆ ಪರಿಣಾಮ ಬೀರಿತು. ಹೀಗಾಗಿ ಅವರು ಮುಂದಿನ ಎಸೆತದಲ್ಲಿ ಪುಲ್ ಶಾಟ್ ಮಾಡಲು ಪ್ರಯತ್ನಿಸಿ ವಿಕೆಟ್ ಕೀಪರ್‌ಗೆ ಸುಲಭವಾದ ಕ್ಯಾಚ್ ನೀಡಿದರು. ಹೀಗಾಗಿ, ಸುಂದರ್ ಕೇವಲ ಐದು ಎಸೆತಗಳನ್ನು ಆಡಿ ಪೆವಿಲಿಯನ್‌ಗೆ ಮರಳಿದರು. ಇದರಿಂದಾಗಿ ಸುಂದರ್ ಫಿಲ್ಡಿಂಗ್ ಸಮಯದಲ್ಲೂ ಮೈದಾನಕ್ಕಿಳಿಯಲಿಲ್ಲ. ಪರಿಣಾಮವಾಗಿ, ಟೀಂ ಇಂಡಿಯಾಕ್ಕೆ ಒಬ್ಬ ಬೌಲರ್​ನ ಕೊರತೆಯುಂಟಾಯಿತು(PC-PTI).

3 / 5
ಪಂದ್ಯ ಮುಗಿದ ಬಳಿಕ ಸುಂದರ್​ಗೆ ಹೆಚ್ಚಿನ ತಪಾಸಣೆ ಮಾಡಲಾಗಿದ್ದು, ಅವರ ಗಾಯ ಗಂಭೀರವಾಗಿರುವುದು ಪತ್ತೆಯಾಗಿದೆ. ಹೀಗಾಗಿ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ ಅವರಿಗೆ ಆಡಲು ಸಾಧ್ಯವಾಗುವುದಿಲ್ಲ ಎಂದು ಪಿಟಿಐ ವರದಿ ಬಹಿರಂಗಪಡಿಸಿದೆ. ಇದರರ್ಥ ಸುಂದರ್ ಸರಣಿಯಿಂದ ಹೊರಗುಳಿದಿದ್ದಾರೆ(PC-PTI).

4 / 5
ಸುಂದರ್ ಅವರ ಗಾಯವು ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ. ಏಕೆಂದರೆ ಮೊದಲ ಪಂದ್ಯದಲ್ಲಿ ಅವರು ಅಕ್ಷರ್ ಪಟೇಲ್ ಅವರೊಂದಿಗೆ ಅಜೇಯ ಶತಕದ ಪಾಲುದಾರಿಕೆಯನ್ನು ನಿರ್ಮಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಹಾಗೆಯೇ ಅದ್ಭುತ ಅರ್ಧಶತಕವನ್ನು ಬಾರಿಸಿದ್ದರು. ಆದರೀಗ ಅವರು ಕೊನೆಯ ಪಂದ್ಯದಿಂದ ಹೊರಬಿದ್ದಿರುವುದರಿಂದ ಅವರ ಜಾಗದಲ್ಲಿ ಯಾರು ಆಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ(PC-PTI).

5 / 5
Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ

ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?

ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ

ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ

ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ

ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​

ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ