AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮ್ಯಾಂಚೆಸ್ಟರ್​ನಲ್ಲಿ 1605 ದಿನಗಳ ಬರ ನೀಗಿಸಿಕೊಂಡ ವಾಷಿಂಗ್ಟನ್ ಸುಂದರ್

Washington Sundar's 4-Year Drought Ends: ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕಗಳನ್ನು ಬಾರಿಸಿ ಭಾರತಕ್ಕೆ ಮುನ್ನಡೆ ಒದಗಿಸಿದ್ದಾರೆ. ಸುಂದರ್ 1605 ದಿನಗಳ ಬಳಿಕ ಅರ್ಧಶತಕ ಸಾಧಿಸಿದ್ದು, ಇದು ಅವರ ಟೆಸ್ಟ್ ವೃತ್ತಿಜೀವನದ ಐದನೇ ಅರ್ಧಶತಕವಾಗಿದೆ. ಜಡೇಜಾ ಈ ಸರಣಿಯಲ್ಲಿ ಐದನೇ ಅರ್ಧಶತಕ ಬಾರಿಸಿದ್ದಾರೆ. ಇಬ್ಬರ ಅದ್ಭುತ ಜೊತೆಯಾಟದಿಂದ ಭಾರತ ಸೋಲಿನಿಂದ ಪಾರಾಗಿದೆ.

ಪೃಥ್ವಿಶಂಕರ
|

Updated on: Jul 27, 2025 | 9:56 PM

Share
ಇಂಗ್ಲೆಂಡ್ ವಿರುದ್ಧದ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ 311 ರನ್‌ಗಳ ಹಿನ್ನಡೆ ಅನುಭವಿಸಿದ್ದರೂ, ಟೀಂ ಇಂಡಿಯಾ ಬಲವಾದ ಕಮ್‌ಬ್ಯಾಕ್ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿತು. ನಾಯಕ ಶುಭ್​ಮನ್ ಗಿಲ್ ಮತ್ತು ಕೆಎಲ್ ರಾಹುಲ್ ನಡುವಿನ 188 ರನ್‌ಗಳ ಪಾಲುದಾರಿಕೆ ಈ ಪುನರಾಗಮನಕ್ಕೆ ಅಡಿಪಾಯ ಹಾಕಿದರೆ, ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್‌ನ ಮುನ್ನಡೆಯನ್ನು ಕೊನೆಗೊಳಿಸಿ ತಂಡಕ್ಕೆ ಮುನ್ನಡೆಯನ್ನು ನೀಡಿದರು.

1 / 5
ಇಡೀ ಸರಣಿಯಲ್ಲಿ ರವೀಂದ್ರ ಜಡೇಜಾ ಬೌಲಿಂಗ್​ನಲ್ಲಿ ಅಷ್ಟು ಯಶಸ್ವಿಯಾಗದಿದ್ದರೂ, ತಮ್ಮ ಬ್ಯಾಟಿಂಗ್‌ನಿಂದ ಹೋರಾಟದ ಪ್ರದರ್ಶನವನ್ನು ತೋರಿಸಿದ್ದಾರೆ. ಲಾರ್ಡ್ಸ್‌ನಲ್ಲಿ ಗೆಲುವಿಗಾಗಿ ಹೋರಾಡಿದ ಜಡ್ಡು, ಇದೀ ಮ್ಯಾಂಚೆಸ್ಟರ್​ನಲ್ಲಿ ಸುಂದರ್ ಜೊತೆಗೂಡಿ ತಂಡವನ್ನು ಸೋಲಿನಿಂದ ಪಾರು ಮಾಡಿದ್ದಾರೆ.

2 / 5
ಈ ವೇಳೆ ಇಬ್ಬರು ಆಟಗಾರರು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದಾರೆ. ಅದರಲ್ಲೂ ಜಡೇಜಾಗೆ ಉತ್ತಮ ಸಾಥ್ ನೀಡಿದ ವಾಷಿಂಗ್ಟನ್ ಸುಂದರ್ ಸುಮಾರು 4 ವರ್ಷಗಳ ಬರವನ್ನು ಕೊನೆಗೂ ನೀಗಿಸಿಕೊಂಡಿದ್ದಾರೆ. ರಾಹುಲ್ ವಿಕೆಟ್ ಬಳಿಕ ಬ್ಯಾಟಿಂಗ್​ಗೆ ಬಂದ ಸುಂದರ್, ಗಿಲ್ ಜೊತೆ ಇನ್ನಿಂಗ್ಸ್ ಕಟ್ಟಿದರು. ಗಿಲ್ ಔಟಾದ ಬಳಿಕ, ಜಡೇಜಾ ಜೊತೆಗೆ ಸ್ಮರಣೀಯ ಇನ್ನಿಂಗ್ಸ್ ಆಡುತ್ತಿದ್ದಾರೆ.

3 / 5
ಹಾಗೆಯೇ ಬೆನ್ ಸ್ಟೋಕ್ಸ್ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಸಿಕ್ಸರ್ ಮತ್ತು ಬೌಂಡರಿ ಬಾರಿಸುವ ಮೂಲಕ ಸುಂದರ್ ಅರ್ಧಶತಕವನ್ನು ಪೂರೈಸಿದರು. ಈ ರೀತಿಯಾಗಿ, 1605 ದಿನಗಳ ನಂತರ, ಸುಂದರ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದರು. ಇದಕ್ಕೂ ಮೊದಲು, ಅವರು ಮಾರ್ಚ್ 5, 2021 ರಂದು ಅಹಮದಾಬಾದ್‌ನಲ್ಲಿ ಈ ತಂಡದ ವಿರುದ್ಧ 96 ರನ್​ಗಳ (ಅಜೇಯ) ಇನ್ನಿಂಗ್ಸ್ ಆಡಿದ್ದರು.

4 / 5
ಇದು ಸುಂದರ್ ಅವರ ಟೆಸ್ಟ್ ವೃತ್ತಿಜೀವನದಲ್ಲಿ ಐದನೇ ಅರ್ಧಶತಕವಾಗಿದ್ದು, ಈ ಪೈಕಿ ಇಂಗ್ಲೆಂಡ್ ವಿರುದ್ಧ ಮೂರನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. ಸುಂದರ್ ಮಾತ್ರವಲ್ಲದೆ, ಜಡೇಜಾ ಕೂಡ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿ ಈ ಟೆಸ್ಟ್ ಸರಣಿಯಲ್ಲಿ ಐದನೇ ಬಾರಿಗೆ ಐವತ್ತರ ಗಡಿ ದಾಟಿದರು. ಇವರಿಬ್ಬರ ಜೊತೆಯಾಟದಿಂದಾಗಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ