AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೊ-ಪಾಕ್ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ವಾಸಿಂ ಅಕ್ರಮ್

India vs Pakistan: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ. ಇಂತಹದ್ದೇ ಕುತೂಹಲದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ಇದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Oct 03, 2023 | 11:06 PM

Share
ಕ್ರಿಕೆಟ್​ ಅಂಗಳದ ಹೈವೋಲ್ಟೇಜ್​ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 14 ರಂದು ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

1 / 14
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ. ಇಂತಹದ್ದೇ ಕುತೂಹಲದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ಇದ್ದಾರೆ. ಈ ಬಾರಿಯ ವಿಶ್ವಕಪ್​ನಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳುತ್ತಿರುವ ಅಕ್ರಮ್ ಇದೀಗ ಸಾರ್ವಕಾಲಿಕ ಸಂಯೋಜಿತ ಭಾರತ-ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್​ ಅನ್ನು ಹೆಸರಿಸಿದ್ದಾರೆ.

2 / 14
ವಿಶೇಷ ಎಂದರೆ ಈ ಆಲ್​ ಟೈಮ್ ಇಂಡೊ-ಪಾಕ್ ಒಡಿಐ ಇಲೆವೆನ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹಾಗೂ ಶಾಹೀನ್ ಅಫ್ರಿದಿಗೆ ಸ್ಥಾನ ನೀಡಲಾಗಿಲ್ಲ. ಆದರೆ ಮತ್ತೊಂದೆಡೆ ಟೀಮ್ ಇಂಡಿಯಾದ 6 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಅಕ್ರಮ್ ಹೆಸರಿಸಿದ ಭಾರತ-ಪಾಕಿಸ್ತಾನ್ ಸಂಯೋಜಿತ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆಂದು ನೋಡೋಣ...

3 / 14
1- ಸಯೀದ್ ಅನ್ವರ್: ಎಡಗೈ ದಾಂಡಿಗ ಸಯೀದ್ ಅನ್ವರ್ ಪಾಕಿಸ್ತಾನದ ಸ್ಟೈಲಿಶ್ ಆರಂಭಿಕ ಬ್ಯಾಟ್ಸ್‌ಮನ್. 1990 ರ ದಶಕದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಆರಂಭಿಕನಾಗಿ ಅನ್ವರ್ ಅವರನ್ನು ಆಯ್ಕೆ ಮಾಡಲಾಗಿದೆ.

4 / 14
2- ವೀರೇಂದ್ರ ಸೆಹ್ವಾಗ್: "ನಜಾಫ್‌ಗಢದ ನವಾಬ್" ಎಂದು ಕರೆಯಲ್ಪಡುವ ಭಾರತೀಯ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ವಾಸಿಂ ಅಕ್ರಮ್ 2ನೇ ಆರಂಭಿಕನಾಗಿ ಹೆಸರಿಸಿದ್ದಾರೆ.

5 / 14
3- ಸಚಿನ್ ತೆಂಡೂಲ್ಕರ್: ಕ್ರಿಕೆಟ್ ಇತಿಹಾಸದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು 3ನೇ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದಾರೆ.

6 / 14
4- ಜಾವೇದ್ ಮಿಯಾಂದಾದ್: ಪಾಕ್ ತಂಡದ ಮಧ್ಯಮ ಕ್ರಮಾಂಕದ ಸರ್ವಶ್ರೇಷ್ಠ ಬ್ಯಾಟರ್ ಎನಿಸಿಕೊಂಡಿದ್ದ ಜಾವೇದ್ ಮಿಯಾಂದಾದ್ ಅವರನ್ನು 4ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

7 / 14
5- ವಿರಾಟ್ ಕೊಹ್ಲಿ: ರನ್ ಮೆಷಿನ್ ಖ್ಯಾತಿ ವಿರಾಟ್ ಕೊಹ್ಲಿಯನ್ನು ವಾಸಿಂ ಅಕ್ರಮ್ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ 5ನೇ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆ ಮಾಡಿರುವುದು ವಿಶೇಷ.

8 / 14
6- ಇಮ್ರಾನ್ ಖಾನ್ (ನಾಯಕ): ಪಾಕ್ ತಂಡದ ಶ್ರೇಷ್ಠ ಆಲ್‌ರೌಂಡರ್ ಇಮ್ರಾನ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ನಾಯಕರಾಗಿ ಆಯ್ಕೆ ಮಾಡಿದ್ದಾರೆ.

9 / 14
7- ಕಪಿಲ್ ದೇವ್: ಟೀಮ್ ಇಂಡಿಯಾಗೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಕ್ಯಾಪ್ಟನ್ ಕಪಿಲ್ ದೇವ್ ಅವರನ್ನು ಆಲ್​ರೌಂಡರ್ ಆಗಿ 7ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

10 / 14
8- ಎಂಎಸ್ ಧೋನಿ: ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವುದು ಮಹೇಂದ್ರ ಸಿಂಗ್ ಧೋನಿ ಎಂಬುದು ವಿಶೇಷ.

11 / 14
9- ಸಕ್ಲೇನ್ ಮುಷ್ತಾಕ್: ಈ ಆಡುವ ಬಳಗದಲ್ಲಿ ಸ್ಪಿನ್ನರ್ ಆಗಿ ಪಾಕ್​ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಸಕ್ಲೇನ್ ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.

12 / 14
10- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಜಸ್​ಪ್ರೀತ್ ಬುಮ್ರಾ ಅವರನ್ನು ಸಾರ್ವಕಾಲಿಕ ಬಳಗದಲ್ಲಿ ಹೆಸರಿಸಿರುವುದು ವಿಶೇಷ.

13 / 14
11- ವಕಾರ್ ಯೂನಿಸ್: ಪಾಕಿಸ್ತಾನದ ವೇಗದ ಬೌಲಿಂಗ್ ದಂತಕಥೆ ವಕಾರ್ ಯೂನಿಸ್ ಅವರನ್ನು ಈ ಪ್ಲೇಯಿಂಗ್ ಇಲೆವೆನ್​ನ ಪ್ರಮುಖ ವೇಗಿಯಾಗಿ ವಾಸಿಂ ಅಕ್ರಮ್ ಆಯ್ಕೆ ಮಾಡಿದ್ದಾರೆ.

14 / 14

Published On - 11:05 pm, Tue, 3 October 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್