- Kannada News Photo gallery Cricket photos We need Virat Kohli at any cost for T20 World Cup: Rohit Sharma
Virat Kohli: ಅದೇನೇ ಆಗಲಿ, ವಿರಾಟ್ ಕೊಹ್ಲಿ ತಂಡದಲ್ಲಿರಬೇಕು: ರೋಹಿತ್ ಶರ್ಮಾ ಖಡಕ್ ಸೂಚನೆ
T20 World Cup 2024: T20 World Cup 2024: ವೆಸ್ಟ್ ಇಂಡೀಸ್-ಯುಎಸ್ಎನಲ್ಲಿ ನಡೆಯಲಿರುವ ಈ ಬಾರಿ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್ನಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ನೀಡಬೇಕೆಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
Updated on: Mar 17, 2024 | 2:02 PM

ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ (T20 World Cup 2024) ತಂಡದಲ್ಲಿ ವಿರಾಟ್ ಕೊಹ್ಲಿಗೆ (Virat Kohli) ಸ್ಥಾನ ನೀಡಲೇಬೇಕೆಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಿಸಿಸಿಐಗೆ ಸೂಚಿಸಿದ್ದಾರೆ. ಈ ಬಗ್ಗೆ ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೊಂದಿಗೆ ಚರ್ಚಿಸಿದ್ದು, ಈ ವೇಳೆ ಹಿಟ್ಮ್ಯಾನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದಕ್ಕೂ ಮುನ್ನ ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗುವ ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗುವುದಿಲ್ಲ ಎಂದು ವರದಿಯಾಗಿತ್ತು. ಈ ಬಾರಿಯ ವಿಶ್ವಕಪ್ ನಡೆಯುವ ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್ಗಳಿದ್ದು, ಇದು ಕೊಹ್ಲಿಯ ಬ್ಯಾಟಿಂಗ್ಗೆ ಸರಿಹೊಂದುವುದಿಲ್ಲ. ಹೀಗಾಗಿ ಕಿರಿಯ ಆಟಗಾರರಿಗೆ ತಂಡದಲ್ಲಿ ಅವಕಾಶ ಮಾಡಿಕೊಡಲು ಕೊಹ್ಲಿಯನ್ನು ಮನವೊಲಿಸುವಂತೆ ಬಿಸಿಸಿಐ ಕಾರ್ಯದರ್ಶಿ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿತ್ತು.

ಆದರೆ ಕಿಂಗ್ ಕೊಹ್ಲಿಯ ಮನವೊಲಿಸಲು ಅಜಿತ್ ಅಗರ್ಕರ್ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜಯ್ ಶಾ ಅವರು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಈ ಜವಾಬ್ದಾರಿಯನ್ನು ವಹಿಸಿದ್ದರು ಎಂದು ಭಾರತ ತಂಡದ ಮಾಜಿ ಆಟಗಾರ ಕೀರ್ತಿ ಆಝಾದ್ ತಿಳಿಸಿದ್ದಾರೆ.

ಆದರೆ ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡಲು ರೋಹಿತ್ ಶರ್ಮಾ ಸುತಾರಾಂ ಸಿದ್ಧರಿಲ್ಲ. ಹೀಗಾಗಿ ಯಾವುದೇ ಬೆಲೆ ತೆತ್ತರೂ ಕೊಹ್ಲಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಬೇಕೆಂದು ರೋಹಿತ್ ಶರ್ಮಾ ಜಯ್ ಶಾಗೆ ಹೇಳಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ ಎಂದು ಕೀರ್ತಿ ಆಝಾದ್ ತಿಳಿಸಿದ್ದಾರೆ.

ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಆಡಲಿರುವುದನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಲಿದೆ ಎಂದು ತಿಳಿದು ಬಂದಿದೆ.

ಅದರಂತೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೊನೆಯ ಬಾರಿ ಜೊತೆಯಾಗಿ ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದ್ದಾರೆ. ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಇಬ್ಬರು ದಿಗ್ಗಜರು ಟಿ20 ಕ್ರಿಕೆಟ್ಗೆ ವಿದಾಯ ಹೇಳುವ ಸಾಧ್ಯತೆಯಿದೆ.




