RCB vs KKR Weather Report: ಆರ್​ಸಿಬಿ-ಕೆಕೆಆರ್ ಪಂದ್ಯಕ್ಕೆ ಮಳೆಯ ಕಾಟ?: ಬೆಂಗಳೂರು ಹವಾಮಾನ ಹೇಗಿದೆ?

|

Updated on: Mar 29, 2024 | 11:51 AM

RCB vs KKR Bengaluru Pitch and Weather Report: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಚ್ 29, ಶುಕ್ರವಾರದಂದು ಆರ್​ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಪಂದ್ಯವನ್ನು ಆಯೋಜಿಸಲು ಸಿದ್ಧವಾಗಿದೆ. ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಎರಡನೇ ತವರು ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು.

2 / 6
ಆರ್​ಸಿಬಿ ಋತುವಿನ ತಮ್ಮ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ಆದರೆ ಪಂಜಾಬ್ ಕಿಂಗ್ಸ್ ಅನ್ನು ತನ್ನ ಎರಡನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಪುಟಿದೆದ್ದಿತು. ಇದೀಗ ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ ಫಾಫ್ ಡುಪ್ಲೆಸಿಸ್ ಪಡೆ.

3 / 6
ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸಾಕಷ್ಟು ಬಿಸಿ ಮತ್ತು ಆರ್ದ್ರ ವಾತಾವರಣವನ್ನು ಹೊಂದಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಯಾವುದೇ ಮಳೆ ಸೂಚನೆಯಿಲ್ಲ. ಹವಾಮಾನ ದಿನವಿಡೀ 34 ಡಿಗ್ರಿ ತಾಪಮಾನದೊಂದಿಗೆ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಹಗಲಿನಲ್ಲಿ ತಾಪಮಾನವು ಸುಮಾರು 27 ರಿಂದ 30 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಇಬ್ಬನಿ ಪರಿಸ್ಥಿತಿಗಳು ಚೇಸಿಂಗ್ ತಂಡಕ್ಕೆ ಸಹಾಯ ಮಾಡಬಹುದು.

4 / 6
ಆರ್ದ್ರತೆ ಸುಮಾರು 35 ಡಿಗ್ರಿ ಇರುತ್ತದೆ ಮತ್ತು ಪಂದ್ಯಕ್ಕೆ ಯಾವುದೇ ಮಳೆಯ ಅಪಾಯವಿಲ್ಲ. ಬೆಂಗಳೂರು ನಗರವು ಇತ್ತೀಚಿನ ದಿನಗಳಲ್ಲಿ ನೀರಿನ ಸಮಸ್ಯೆಯಿಂದ ಕೂಡ ತೊಂದರೆಗೀಡಾಗಿದೆ. ಆದರೆ ಐಪಿಎಲ್‌ಗೆ ಇದರಿಂದ ಯಾವುದೇ ತೊಂದರೆಯಿಲ್ಲ ಎಂದು ಕೆಎಸ್‌ಸಿಎ ಖಚಿತಪಡಿಸಿದೆ.

5 / 6
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಹಲವು ವರ್ಷಗಳಿಂದ ಬ್ಯಾಟಿಂಗ್ ಸ್ನೇಹಿಯಾಗಿದೆ. ಐಪಿಎಲ್‌ನಲ್ಲಿ ಬ್ಯಾಟಿಂಗ್ ಸ್ವರ್ಗವಾಗಿ ಪರಿಣಮಿಸಿದೆ. ಹೀಗಾಗಿ ತಂಡಗಳು ಈ ಸ್ಥಳದಲ್ಲಿ ಚೇಸ್ ಮಾಡಲು ಆಯ್ಕೆ ಮಾಡಿಕೊಳ್ಳುತ್ತವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳಿಗಿಂತ ಚೇಸಿಂಗ್ ತಂಡಗಳು ಈ ಸ್ಥಳದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿವೆ.

6 / 6
ಸದ್ಯ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.180 ಆಗಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಇಂದಿನ ಪಂದ್ಯ ಗೆಲ್ಲಲೇ ಬೇಕಿದೆ.