
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಚ್ 25, ಸೋಮವಾರದಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಐಪಿಎಲ್ 2024 ಪಂದ್ಯವನ್ನು ಆಯೋಜಿಸಲು ಸಿದ್ಧವಾಗಿದೆ. ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮೊದಲ ತವರು ಪಂದ್ಯವಾಗಿದೆ. ಮೊದಲ ಪಂದ್ಯದ ಸೋಲಿನ ಬಳಿಕ ಆರ್ಸಿಬಿ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆಪಾಕ್‌ನಲ್ಲಿ ದಾಖಲಿಸಿದ 173 ರನ್‌ಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಬೌಲಿಂಗ್ನಲ್ಲಿ ಫಾಫ್ ಪಡೆ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಬದಲಾವಣೆ ಕೂಡ ನಿರೀಕ್ಷಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?. ಇಲ್ಲಿದೆ ನೋಡಿ ಹವಾಮಾನ ವರದಿ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸಾಕಷ್ಟು ಬಿಸಿ ಮತ್ತು ಆರ್ದ್ರ ವಾತಾವರಣವನ್ನು ಹೊಂದಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಯಾವುದೇ ಮಳೆ ಸೂಚನೆಯಿಲ್ಲ. ಹವಾಮಾನ ದಿನವಿಡೀ 34 ಡಿಗ್ರಿ ತಾಪಮಾನದೊಂದಿಗೆ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಹಗಲಿನಲ್ಲಿ ತಾಪಮಾನವು ಸುಮಾರು 25 ಡಿಗ್ರಿಗಳಾಗಿರುತ್ತದೆ. ಇಬ್ಬನಿ ಪರಿಸ್ಥಿತಿಗಳು ಚೇಸಿಂಗ್ ತಂಡಕ್ಕೆ ಸಹಾಯ ಮಾಡಬಹುದು.

ಆರ್ದ್ರತೆ ಸುಮಾರು 35 ಡಿಗ್ರಿ ಇರುತ್ತದೆ ಮತ್ತು ಪಂದ್ಯಕ್ಕೆ ಯಾವುದೇ ಮಳೆಯ ಅಪಾಯವಿಲ್ಲ. ಬೆಂಗಳೂರು ನಗರವು ಇತ್ತೀಚಿನ ದಿನಗಳಲ್ಲಿ ನೀರಿನ ಸಮಸ್ಯೆಯಿಂದ ಕೂಡ ತೊಂದರೆಗೀಡಾಗಿದೆ. ಆದರೆ ಐಪಿಎಲ್‌ಗೆ ಇದರಿಂದ ಯಾವುದೇ ತೊಂದರೆಯಿಲ್ಲ ಎಂದು ಕೆಎಸ್‌ಸಿಎ ಖಚಿತಪಡಿಸಿದೆ.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಹಲವು ವರ್ಷಗಳಿಂದ ಬ್ಯಾಟಿಂಗ್ ಸ್ನೇಹಿಯಾಗಿದೆ. ಐಪಿಎಲ್‌ನಲ್ಲಿ ಬ್ಯಾಟಿಂಗ್ ಸ್ವರ್ಗವಾಗಿ ಪರಿಣಮಿಸಿದೆ. ಹೀಗಾಗಿ ತಂಡಗಳು ಈ ಸ್ಥಳದಲ್ಲಿ ಚೇಸ್ ಮಾಡಲು ಆಯ್ಕೆ ಮಾಡಿಕೊಳ್ಳುತ್ತವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳಿಗಿಂತ ಚೇಸಿಂಗ್ ತಂಡಗಳು ಈ ಸ್ಥಳದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿವೆ.

ಸದ್ಯ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಇವರ ನೆಟ್ ರನ್ರೇಟ್ -0.779 ಆಗಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇಳಲು ಇಂದಿನ ಪಂದ್ಯ ಗೆಲ್ಲಲೇ ಬೇಕಿದೆ.