AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ವೆಸ್ಟ್ ಇಂಡೀಸ್

New Zealand vs West Indies: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಆಕ್ಲೆಂಡ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 20 ಓವರ್​​​ಗಳಲ್ಲಿ 8 ವಿಕೆಟ್ ಕಳೆದುಕೊಂಡು 204 ರನ್​​ ಗಳಿಸಲಷ್ಟೇ ಶಕ್ತರಾಗಿದ್ದರು.

ಝಾಹಿರ್ ಯೂಸುಫ್
|

Updated on: Nov 08, 2025 | 7:10 AM

Share
ಟಿ20 ಕ್ರಿಕೆಟ್​​ನಲ್ಲಿ ವೆಸ್ಟ್ ಇಂಡೀಸ್ (West Indies) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಕೊನೆಯ 5 ಓವರ್​​​ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಆಕ್ಲೆಂಡ್​ನ ಈಡನ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 8
ಈ ಮ್ಯಾಚ್​​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 207 ರನ್​​ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅಲ್ಲದೆ ಕೇವಲ 86 ರನ್​​​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 8
ಈ ಹಂತದಲ್ಲಿ ಕಣಕ್ಕಿಳಿದ ರೋವ್​​ಮನ್ ಪೊವೆಲ್ ಹಾಗೂ ರೊಮಾರಿಯೊ ಶೆಫರ್ಡ್​ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 15 ಓವರ್​​​​ಗಳ ಮುಕ್ತಾಯದ ವೇಳೆಗೆ ವೆಸ್ಟ್ ಇಂಡೀಶ್ ತಂಡವು 6 ವಿಕೆಟ್​ ಕಳೆದುಕೊಂಡು ಬರೋಬ್ಹರಿ 117 ರನ್​ ಕಲೆಹಾಕಿತು.

3 / 8
ಇದಾದ ಬಳಿಕ ಶುರುವಾಗಿದ್ದೇ ಸಿಡಿಲಬ್ಬರ. ರೋವ್​​ಮನ್ ಪೊವೆಲ್ ಹಾಗೂ ರೊಮಾರಿಯೊ ಶೆಫರ್ಡ್ ಸಿಕ್ಸರ್​​ಗಳ ಸುರಿಮಳೆಗೈದರು. 16ನೇ ಓವರ್​​ನಲ್ಲಿ 24 ರನ್​ ಚಚ್ಚಿದ ಈ ಜೋಡಿಯು 17ನೇ ಓವರ್​​ನಲ್ಲಿ 15 ರನ್​ ಕಲೆಹಾಕಿತು. ಈ ಹಂತದಲ್ಲಿ 34 ರನ್ ಬಾರಿಸಿದ ರೊಮಾರಿಯೊ ಶೆಫರ್ಡ್ ಔಟಾದರು.

4 / 8
ಆ ಬಳಿಕ ರೋವ್​​ಮನ್ ಪೊವೆಲ್ ಹಾಗೂ ಮ್ಯಾಥ್ಯೂ ಫೋರ್ಡ್ ಅಬ್ಬರ ಶುರುವಾಯಿತು. ಪರಿಣಾಮ 18ನೇ ಓವರ್​​ನಲ್ಲಿ 22 ರನ್​​ಗಳು ಮೂಡಿಬಂದವು. ಆ ನಂತರದ 6 ಎಸೆತಗಳಲ್ಲಿ 14 ರನ್ ಮೂಡಿಬಂತು. ಇನ್ನು ಕೊನೆಯ ಓವರ್​​ನಲ್ಲಿ 12 ರನ್​​ ಕಲೆಹಾಕಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು 20 ಓವರ್​​ಗಳಲ್ಲಿ 204 ರನ್​​ಗಳಿಸಿ 3 ರನ್​​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

5 / 8
ಅಂದರೆ 15 ಓವರ್​​ಗಳಲ್ಲಿ 117 ರನ್​ ಕಲೆಹಾಕಿದ್ದ ವೆಸ್ಟ್ ಇಂಡೀಸ್ ಕೊನೆಯ 5 ಓವರ್​ಗಳಿಸಿದ್ದು ಬರೋಬ್ಬರಿ 87 ರನ್​​ಗಳು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೊನೆಯ 5 ಓವರ್​​​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ತಂಡವೆಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

6 / 8
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಇಂಗ್ಲೆಂಡ್ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಕೊನೆಯ 5 ಓವರ್​​​ಗಳಲ್ಲಿ 86 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ಭರ್ಜರಿ ದಾಖಲೆಯನ್ನು ಮುರಿಯುವಲ್ಲಿ ವೆಸ್ಟ್ ಇಂಡೀಸ್ ತಂಡ ಯಶಸ್ವಿಯಾಗಿದೆ.

7 / 8
ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಕೊನೆಯ 5 ಓವರ್​​​​ಗಳಲ್ಲಿ ಬರೋಬ್ಬರಿ 87 ರನ್​ ಬಾರಿಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಕೊನೆಯ 30 ಎಸೆತಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ವೆಸ್ಟ್ ಇಂಡೀಸ್ ಪಡೆ ತನ್ನದಾಗಿಸಿಕೊಂಡಿದೆ.

8 / 8
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್

ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ

ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು

ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ