T20 World Cup 2024: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರ ಔಟ್

T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಮೊದಲ ಹಂತದಲ್ಲಿ ಪ್ರತಿ ತಂಡಗಳು 4 ಲೀಗ್ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಸೂಪರ್-8 ಪಂದ್ಯಗಳು ಜರುಗಲಿದ್ದು, ಈ ಪಂದ್ಯಗಳಲ್ಲಿ ಗೆಲುವು ದಾಖಲಿಸುವ ತಂಡಗಳು ಸೆಮಿಫೈನಲ್​ಗೇರಲಿದೆ.

ಝಾಹಿರ್ ಯೂಸುಫ್
|

Updated on:May 28, 2024 | 2:53 PM

T20 World Cup 2024: ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ಬಲಿಷ್ಠ ಬಳಗವನ್ನು ಘೋಷಿಸಿದೆ. ಈ ಹಿಂದೆ ಪ್ರಕಟಿಸಲಾದ 15 ಸದಸ್ಯರ ತಂಡದಿಂ ಓರ್ವ ಆಟಗಾರನನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ವೇಗಿ ಒಬೆಡ್ ಮೆಕಾಯ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

1 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ತಂಡದಲ್ಲಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದರು. ಇದರ ನಡುವೆ ಇಂಗ್ಲೆಂಡ್​ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದ ವೇಳೆ ಹೋಲ್ಡರ್ ಗಾಯಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಫಲರಾಗಿರುವ ಹೋಲ್ಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 5
ಇದರ ಬೆನ್ನಲ್ಲೇ 27 ವರ್ಷದ ಒಬೆಡ್ ಮೆಕಾಯ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ಪರ 34 ಟಿ20 ಪಂದ್ಯಗಳನ್ನಾಡಿರುವ ಮೆಕಾಯ್ ಈವರೆಗೆ 46 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

3 / 5
ಹೀಗಾಗಿಯೇ ಮೆಕಾಯ್ ಅವರಿಗೆ ವೆಸ್ಟ್ ಇಂಡೀಸ್ ಬಳಗದಲ್ಲಿ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪಡೆ ರೋವ್​ಮನ್ ಪೊವೆಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಈ ತಂಡದಲ್ಲಿ ನಿಕೋಲಸ್ ಪೂರನ್, ಆ್ಯಂಡ್ರೆ ರಸೆಲ್​ನಂತಹ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ವೆಸ್ಟ್ ಇಂಡೀಸ್ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

4 / 5
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್, ಅಲ್ಝಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಗುಡಕೇಶ್ ಮೋಟಿ, ಆ್ಯಂಡ್ರೆ ರಸೆಲ್, ನಿಕೋಲಸ್ ಪೂರನ್, ಶೆರ್ಫೇನ್ ರುದರ್​ಫೋರ್ಡ್, ರೊಮಾರಿಯೊ ಶೆಫರ್ಡ್.

5 / 5

Published On - 2:53 pm, Tue, 28 May 24

Follow us