ದುರ್ಬಲ ತಂಡಗಳನ್ನು ಸೋಲಿಸಿ ಬಲಿಷ್ಠರಾಗುವುದಲ್ಲ: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ
TV9 Web | Updated By: ಝಾಹಿರ್ ಯೂಸುಫ್
Updated on:
Jun 13, 2023 | 3:58 PM
India vs West Indies: ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.
1 / 6
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.
2 / 6
ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.
3 / 6
ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
4 / 6
ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.
5 / 6
ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.
6 / 6
ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.