AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಕೀರನ್ ಪೊಲಾರ್ಡ್

Kieron Pollard Records: ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ 700 ಟಿ20 ಪಂದ್ಯಗಳನ್ನಾಡಿದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದ ಪೊಲಾರ್ಡ್ ಇದೀಗ ಮತ್ತೆರಡು ದಾಖಲೆಗಳನ್ನು ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 31, 2025 | 9:05 AM

Share
ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ ವೆಸ್ಟ್ ಇಂಡೀಸ್​​ನ ಕೀರನ್ ಪೊಲಾರ್ಡ್ (Kieron Pollard)​. ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಡೆದ ಬಾರ್ಡೋಸ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪೊಲಾರ್ಡ್ 19 ರನ್​ ಬಾರಿಸಿದ್ದರು. ಈ 19 ರನ್​ಗಗಳೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 14 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೀರನ್ ಪೊಲಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ.

1 / 6
ಇದರ ಜೊತೆಗೆ ಟಿ20 ಕ್ರಿಕೆಟ್​​ ಇತಿಹಾಸದಲ್ಲಿ 14 ಸಾವಿರ ರನ್ ಹಾಗೂ 300 ವಿಕೆಟ್ ಕಬಳಿಸಿದ ವಿಶ್ವ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ಕೀರನ್ ಪೊಲಾರ್ಡ್ ನಿರ್ಮಿಸಿದ್ದಾರೆ. ಅಂದರೆ ಟಿ20 ಕ್ರಿಕೆಟ್​​​ನಲ್ಲಿ 9 ಬ್ಯಾಟರ್​​ಗಳು 12 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಹಾಗೆಯೇ 30 ಬೌಲರ್​​ಗಳು 300 ಕ್ಕೂ ಹೆಚ್ಚು ವಿಕೆಟ್ ಕಬಳಿಸಿದ್ದಾರೆ.

2 / 6
ಆದರೆ 14 ಸಾವಿರ ರನ್​ಗಳ ಜೊತೆ 300 ವಿಕೆಟ್ ಕಬಳಿಸಿರುವುದು ಕೀರನ್ ಪೊಲಾರ್ಡ್ ಮಾತ್ರ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ಅಪರೂಪದ ವರ್ಲ್ಡ್​ ರೆಕಾರ್ಡ್ ಬರೆಯುವಲ್ಲಿ ಪೊಲಾರ್ಡ್ ಯಶಸ್ವಿಯಾಗಿದ್ದಾರೆ. 

3 / 6
ಇನ್ನು ಟಿ20 ಕ್ರಿಕೆಟ್​​​ನಲ್ಲಿ ಅತ್ಯಧಿಕ ರನ್ ಗಳಿಸಿರುವುದ ವೆಸ್ಟ್ ಇಂಡೀಸ್​​ನ ಸ್ಫೋಟಕ ದಾಂಡಿಗ ಕ್ರಿಸ್ ಗೇಲ್. ಟಿ20 ಕ್ರಿಕೆಟ್​ನಲ್ಲಿ 455 ಇನಿಂಗ್ಸ್​ ಆಡಿರುವ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದ ರನ್ ಸರದಾರ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಹೆಸರಿನಲ್ಲಿದೆ. 483 ಟಿ20 ಇನಿಂಗ್ಸ್​ ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ ಈವರೆಗೆ 660 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ 650+ ವಿಕೆಟ್ ಪಡೆದ ಏಕೈಕ ಬೌಲರ್​ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 6
ಇದೀಗ ಆಲ್​ರೌಂಡರ್ ಪ್ರದರ್ಶನದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 14 ಸಾವಿರ ರನ್ + 300 ವಿಕೆಟ್ ಪಡೆದ ವಿಶ್ವದ ಏಕೈಕ ಆಟಗಾರನಾಗಿ ಕೀರನ್ ಪೊಲಾರ್ಡ್ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲದೆ ಇನ್ನು 563 ರನ್​ಗಳಿಸಿದರೆ ಟಿ20 ರನ್ ಸರದಾರರ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಲಿದ್ದಾರೆ.

6 / 6

Published On - 9:04 am, Sun, 31 August 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?