ಸೆಂಟ್ರಲ್ ಬ್ರೋವರ್ಡ್ ಪಿಚ್ಗೆ ಮತ್ತೊಮ್ಮೆ ಸವಾಲೊಡ್ಡಲಿದೆ ಟೀಮ್ ಇಂಡಿಯಾ: ಇಂದು ಯಾರಿಗೆ ಜಯ?
IND vs WI 5th T20I Pitch Report: ಹಿಂದಿನ ಪಿಚ್ಗಳಿಗೆ ಹೋಲಿಸಿದರೆ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ವಿಭಿನ್ನವಾಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಹೆಚ್ಚು ಪ್ರಾಬಲ್ಯ ಸಾಧಿಸಿದೆ. ಆದರೆ, ನಿನ್ನೆಯ ಪಂದ್ಯದಲ್ಲಿ ಇದು ಸುಳ್ಳಾಯಿತು. ಇಲ್ಲಿ ಆಡಿದ 15 ಟಿ20 ಪಂದ್ಯಗಳ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ 11 ಬಾರಿ ಗೆದ್ದಿದೆ.
1 / 8
ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ಐದನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ನಾಲ್ಕನೇ ಟಿ20 ಪಂದ್ಯ ಮುಗಿದ ಬೆನ್ನಲ್ಲೇ ಒಂದು ದಿನ ಕೂಡ ವಿಶ್ರಾಂತಿ ಇಲ್ಲಿದೆ ಇಂದು (ಆಗಸ್ಟ್ 13) ಅಮೆರಿಕಾದ ಫ್ಲೋರಿಡಾದಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ.
2 / 8
ಆರಂಭಿಕ ಪಂದ್ಯಗಳಲ್ಲಿ ಸತತ ಎರಡು ಸೋಲುಗಳನ್ನು ಅನುಭವಿಸಿದ ನಂತರ, ಹಾರ್ದಿಕ್ ಪಾಂಡ್ಯ ಪಡೆ ಇದೀಗ ಮೂರನೇ ಮತ್ತು ನಾಲ್ಕನೇ ಟಿ20 ಯಲ್ಲಿ ಗೆಲುವು ಕಂಡು ಸರಣಿ ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಸೇರಲಿದೆ. ಹೀಗೆ ಇಂದಿನ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
3 / 8
ಹಿಂದಿನ ಪಿಚ್ಗಳಿಗೆ ಹೋಲಿಸಿದರೆ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ವಿಭಿನ್ನವಾಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಹೆಚ್ಚು ಪ್ರಾಬಲ್ಯ ಸಾಧಿಸಿದೆ. ಆದರೆ, ನಿನ್ನೆಯ ಪಂದ್ಯದಲ್ಲಿ ಇದು ಸುಳ್ಳಾಯಿತು. ಇಲ್ಲಿ ಆಡಿದ 15 ಟಿ20 ಪಂದ್ಯಗಳ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ 11 ಬಾರಿ ಗೆದ್ದಿದೆ. ಚೇಸಿಂಗ್ ಮಾಡಿದ ತಂಡ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯ ಕಂಡಿದೆ.
4 / 8
ಬೌಲರ್‌ಗಳಿಗೆ ಹೋಲಿಸಿದರೆ ಬ್ಯಾಟರ್‌ಗಳು ಈ ಪಿಚ್‌ನಿಂದ ಹೆಚ್ಚಿನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಇದು ನಾಳ್ಕನೇ ಟಿ20 ಪಂದ್ಯದಲ್ಲಿ ಕೂಡ ಕಂಡುಬಂತು. ಆದಾಗ್ಯೂ, ಸ್ಪಿನ್ನರ್‌ಗಳು ಅರ್ಧ ಪಂದ್ಯದ ನಂತರ ಮಿಂಚುವ ನಿರೀಕ್ಷೆಯಿದೆ. ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 165 ಆಗಿದೆ. ಪಂದ್ಯ ಸಾಗಿದಂತೆ ಪಿಚ್ ಹದಗೆಡುತ್ತದೆ.
5 / 8
ಭಾರತದಲ್ಲಿ ಬಹುದಿನಗಳಿಂದ ಕಾಡುತ್ತಿದ್ದ ಆರಂಭಿಕರ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ನಾಲ್ಕನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. 165 ರನ್ಗಳ ಜೊತೆಯಾಟ ಆಡಿ ತಂಡದ ಜಯದಲ್ಲಿ ಪ್ರಮುಖ ಪಾತ್ರವಹಿಸಿದರು. ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ.
6 / 8
ಪಂದ್ಯ ಎಷ್ಟು ಗಂಟೆಗೆ?: ಭಾರತ-ವೆಸ್ಟ್ ಇಂಡೀಸ್ ನಡುವಣ ಐದನೇ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.
7 / 8
ಭಾರತ ಸಂಭಾವ್ಯ ತಂಡ: ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.
8 / 8
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್.