Andre Russell: ಸೋಲಿನೊಂದಿಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್

Updated on: Jul 23, 2025 | 10:16 AM

Andre Russell Retirement: ಆ್ಯಂಡ್ರೆ ರಸೆಲ್ ವೆಸ್ಟ್ ಇಂಡೀಸ್ ಪರ 56 ಏಕದಿನ, 86 ಟಿ20 ಹಾಗೂ ಒಂದು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟಿ20 ಕ್ರಿಕೆಟ್​ನಲ್ಲಿ 1122 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 1034 ರನ್​ ಗಳಿಸಿದ್ದರು. ಇನ್ನು ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ ಹಾಗೂ 1 ವಿಕೆಟ್ ಪಡೆದಿದ್ದರು. 

1 / 5
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಜಮೈಕಾದ ಸೆಬಿನಾ ಪಾರ್ಕ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಪಂದ್ಯದ ಮೂಲಕ ರಸೆಲ್ ಇಂಟರ್​ನ್ಯಾಷನಲ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ. ಅದು ಸಹ ಸೋಲಿನೊಂದಿಗೆ..!

2 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಆ್ಯಂಡ್ರೆ ರಸೆಲ್ 15 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 36 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್​ನ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಜೋಶ್ ಇಂಗ್ಲಿಸ್ (78) ಹಾಗೂ ಕ್ಯಾಮರೋನ್ ಗ್ರೀನ್ (56) ಭರ್ಜರಿ ಅರ್ಧಶತಕ ಬಾರಿಸಿದ್ದು, ಈ ಮೂಲಕ ಆಸ್ಟ್ರೇಲಿಯಾ ತಂಡ 15.2 ಓವರ್​ಗಳಲ್ಲಿ 173 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ರಸೆಲ್ ಅವರ ಅಂತಾರಾಷ್ಟ್ರೀಯ ಕೆರಿಯರ್ ಸೋಲಿನೊಂದಿಗೆ ಕೊನೆಗೊಂಡಿತು.

3 / 5
2011 ರಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 75 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1122 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

4 / 5
ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

5 / 5
ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ಆ್ಯಂಡ್ರೆ ರಸೆಲ್ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.