ಈ ವರ್ಷದ ಆರಂಭದಲ್ಲಿಯೇ ಟೆಸ್ಟ್ ಕ್ರಿಕೆಟ್ ಅವಿಸ್ಮರಣೀಯ ಗೆಲುವೊಂದಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶ ತಂಡವು ಆತಿಥೇಯ ನ್ಯೂಜಿಲೆಂಡ್ ಟೆಸ್ಟ್ ಸರಣಿ ಆಡುತ್ತಿದೆ. ಸರಣಿಯ ಮೊದಲ ಪಂದ್ಯವು ಜನವರಿ 1 ರಂದು ಆರಂಭವಾಗಿ ಐದು ದಿನಗಳ ಕಾಲ ನಡೆಯಿತು. ಈ ಪಂದ್ಯದಲ್ಲಿ ಬಾಂಗ್ಲಾದೇಶ ಎಂಟು ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿರುವುದು ವಿಶೇಷ. ಇದು ನ್ಯೂಜಿಲೆಂಡ್‌ನಲ್ಲಿ ಬಾಂಗ್ಲಾದೇಶದ ಮೊದಲ ಟೆಸ್ಟ್ ಗೆಲುವು ಎಂಬುದು ಮತ್ತೊಂದು ವಿಶೇಷ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 328 ರನ್ ಗಳಿಸಿದರೆ, ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 458 ರನ್ ಗಳಿಸಿತ್ತು. ಇದರ ನಂತರ, ಬಾಂಗ್ಲಾ ಬೌಲರ್‌ಗಳ ಪರಾಕ್ರಮದಿಂದಾಗಿ ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 160 ರನ್‌ಗಳಿಗೆ ಆಲೌಟ್ ಆಯಿತು. ಕೇವಲ 40 ರನ್‌ಗಳ ಗುರಿ ಪಡೆದ ಬಾಂಗ್ಲಾ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿತು.