AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ವಿಶ್ವಕಪ್​ನಿಂದ ಪಾಕಿಸ್ತಾನ್ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? ಇಲ್ಲಿದೆ ಮಾಹಿತಿ

ICC World Cup 2023: ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ.

TV9 Web
| Edited By: |

Updated on: Jul 09, 2023 | 9:30 PM

Share
ICC ODI World Cup 2023: ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಈ ಕ್ರಿಕೆಟ್ ಕದನಕ್ಕಾಗಿ ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಇದಾಗ್ಯೂ ಪಾಕಿಸ್ತಾನ್ ತಂಡ ಮಾತ್ರ ಇದುವರೆಗೆ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಿಲ್ಲ.

1 / 11
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ್ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಭಾರತವು ಏಷ್ಯಾಕಪ್​ಗಾಗಿ ತಮ್ಮ ದೇಶಕ್ಕೆ ಬರದಿದ್ದರೆ, ಪಾಕಿಸ್ತಾನ್ ತಂಡವನ್ನು ಭಾರತದಲ್ಲಿ ಏಕದಿನ ವಿಶ್ವಕಪ್ ಆಡಲು ಕಳುಹಿಸುವುದಿಲ್ಲ ಎಂದಿದ್ದಾರೆ. ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಭಾಗಹಿಸುವುದಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 11
ಒಂದು ವೇಳೆ ಪಾಕಿಸ್ತಾನ್ ತಂಡ ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಐಸಿಸಿಯ ಮುಂದಿನ ನಡೆಯೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಳ್ಳುವುದು ಸಹಜ. ಈ ಪ್ರಶ್ನೆಗೆ ಸದ್ಯದ ಉತ್ತರ ಮತ್ತೊಂದು ತಂಡಕ್ಕೆ ಅವಕಾಶ.

3 / 11
ಅಂದರೆ ಈಗಾಗಲೇ ಅರ್ಹತೆ ಪಡೆದಿರುವ ತಂಡಗಳಲ್ಲಿ ಒಂದು ಟೀಮ್ ವಿಶ್ವಕಪ್​ನಿಂದ ಹೊರಗುಳಿದರೆ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 3ನೇ ತಂಡವನ್ನು ಆಯ್ಕೆ ಮಾಡಲಾಗುತ್ತದೆ.

4 / 11
ಈ ಬಾರಿಯ ಏಕದಿನ ವಿಶ್ವಕಪ್​ಗೆ 8 ತಂಡಗಳು ನೇರವಾಗಿ ಅರ್ಹತೆ ಪಡೆದರೆ, ಶ್ರೀಲಂಕಾ ಹಾಗೂ ನೆದರ್​ಲ್ಯಾಂಡ್ಸ್​ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರವೇಶ ಪಡೆದುಕೊಂಡಿದೆ. ಇಲ್ಲಿ ಸೂಪರ್ ಸಿಕ್ಸ್​ ಪಾಯಿಂಟ್ಸ್ ಟೇಬಲ್​ನಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದರೆ, ನೆದರ್​ಲ್ಯಾಂಡ್ಸ್ ದ್ವಿತೀಯ ಸ್ಥಾನ ಅಲಂಕರಿಸಿದೆ.

5 / 11
ಇನ್ನು ಮೂರನೇ ಸ್ಥಾನದಲ್ಲಿರುವುದು ಸ್ಕಾಟ್​ಲ್ಯಾಂಡ್ ತಂಡ. ಹೀಗಾಗಿ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಸ್ಕಾಟ್​ಲ್ಯಾಂಡ್ ತಂಡಕ್ಕೆ ಅದೃಷ್ಟ ಖುಲಾಯಿಸಲಿದೆ. ಅದರಂತೆ ಪಾಕಿಸ್ತಾನ್ ತಂಡದ ಜಾಗದಲ್ಲಿ ಸ್ಕಾಟ್​ಲ್ಯಾಂಡ್ ಕಣಕ್ಕಿಳಿಯಬಹುದು.

6 / 11
ಸದ್ಯ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವಿಕೆಯ ಬಗ್ಗೆ ಯಾವುದೇ ಸ್ಪಷನೆ ನೀಡದೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿ ಮುಂದೆ​ ನಾನಾ ಕಾರಣಗಳನ್ನು ಮುಂದಿಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್​ನಿಂದ ಟೀಮ್ ಇಂಡಿಯಾ ಹಿಂದೆ ಸರಿದಿರುವುದು.

7 / 11
ಅಂದರೆ ಈ ಬಾರಿಯ ಏಷ್ಯಾಕಪ್​ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ಏಷ್ಯಾಕಪ್​ನ್ನು ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡಿದ್ರೆ ಮಾತ್ರ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ತಿಳಿಸಿತ್ತು.

8 / 11
ಅದರಂತೆ ಇದೀಗ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿ ಭಾರತದ ಎಲ್ಲಾ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

9 / 11
ಇತ್ತ ಪಾಕಿಸ್ತಾನಕ್ಕೆ ಆಗಮಿಸಲು ನಿರಾಕರಿಸಿರುವ ಭಾರತದ ನಡೆಗೆ ಪ್ರತೀಕಾರವಾಗಿ ಇದೀಗ ಪಾಕ್ ಕ್ರಿಕೆಟ್ ಬೋರ್ಡ್ ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಕಳುಹಿಸಲು ಹಿಂದೇಟು ಹಾಕುತ್ತಿದೆ.

10 / 11
ಅಲ್ಲದೆ ಭಾರತದಲ್ಲಿನ ಏಕದಿನ ವಿಶ್ವಕಪ್​ನಲ್ಲಿ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಲು ಇದೀಗ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಸಲ್ಲಿಸುವ ವರದಿಯ ಬಳಿಕ ಪಾಕಿಸ್ತಾನ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

11 / 11
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್