ODI World Cup 2023: ವಿಶ್ವಕಪ್ನಿಂದ ಪಾಕಿಸ್ತಾನ್ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? ಇಲ್ಲಿದೆ ಮಾಹಿತಿ
TV9 Web | Updated By: ಝಾಹಿರ್ ಯೂಸುಫ್
Updated on:
Jul 09, 2023 | 9:30 PM
ICC World Cup 2023: ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ.
1 / 11
ICC ODI World Cup 2023: ಏಕದಿನ ವಿಶ್ವಕಪ್ಗೆ ಕೌಂಟ್ ಡೌನ್ ಶುರುವಾಗಿದೆ. ಭಾರತದಲ್ಲಿ ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಈ ಕ್ರಿಕೆಟ್ ಕದನಕ್ಕಾಗಿ ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಇದಾಗ್ಯೂ ಪಾಕಿಸ್ತಾನ್ ತಂಡ ಮಾತ್ರ ಇದುವರೆಗೆ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಿಲ್ಲ.
2 / 11
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ್ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಭಾರತವು ಏಷ್ಯಾಕಪ್ಗಾಗಿ ತಮ್ಮ ದೇಶಕ್ಕೆ ಬರದಿದ್ದರೆ, ಪಾಕಿಸ್ತಾನ್ ತಂಡವನ್ನು ಭಾರತದಲ್ಲಿ ಏಕದಿನ ವಿಶ್ವಕಪ್ ಆಡಲು ಕಳುಹಿಸುವುದಿಲ್ಲ ಎಂದಿದ್ದಾರೆ. ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ್ ಭಾಗಹಿಸುವುದಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
3 / 11
ಒಂದು ವೇಳೆ ಪಾಕಿಸ್ತಾನ್ ತಂಡ ಏಕದಿನ ವಿಶ್ವಕಪ್ನಿಂದ ಹೊರಗುಳಿದರೆ ಐಸಿಸಿಯ ಮುಂದಿನ ನಡೆಯೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಳ್ಳುವುದು ಸಹಜ. ಈ ಪ್ರಶ್ನೆಗೆ ಸದ್ಯದ ಉತ್ತರ ಮತ್ತೊಂದು ತಂಡಕ್ಕೆ ಅವಕಾಶ.
4 / 11
ಅಂದರೆ ಈಗಾಗಲೇ ಅರ್ಹತೆ ಪಡೆದಿರುವ ತಂಡಗಳಲ್ಲಿ ಒಂದು ಟೀಮ್ ವಿಶ್ವಕಪ್ನಿಂದ ಹೊರಗುಳಿದರೆ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 3ನೇ ತಂಡವನ್ನು ಆಯ್ಕೆ ಮಾಡಲಾಗುತ್ತದೆ.
5 / 11
ಈ ಬಾರಿಯ ಏಕದಿನ ವಿಶ್ವಕಪ್ಗೆ 8 ತಂಡಗಳು ನೇರವಾಗಿ ಅರ್ಹತೆ ಪಡೆದರೆ, ಶ್ರೀಲಂಕಾ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರವೇಶ ಪಡೆದುಕೊಂಡಿದೆ. ಇಲ್ಲಿ ಸೂಪರ್ ಸಿಕ್ಸ್ ಪಾಯಿಂಟ್ಸ್ ಟೇಬಲ್ನಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದರೆ, ನೆದರ್ಲ್ಯಾಂಡ್ಸ್ ದ್ವಿತೀಯ ಸ್ಥಾನ ಅಲಂಕರಿಸಿದೆ.
6 / 11
ಇನ್ನು ಮೂರನೇ ಸ್ಥಾನದಲ್ಲಿರುವುದು ಸ್ಕಾಟ್ಲ್ಯಾಂಡ್ ತಂಡ. ಹೀಗಾಗಿ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ನಿಂದ ಹೊರಗುಳಿದರೆ ಸ್ಕಾಟ್ಲ್ಯಾಂಡ್ ತಂಡಕ್ಕೆ ಅದೃಷ್ಟ ಖುಲಾಯಿಸಲಿದೆ. ಅದರಂತೆ ಪಾಕಿಸ್ತಾನ್ ತಂಡದ ಜಾಗದಲ್ಲಿ ಸ್ಕಾಟ್ಲ್ಯಾಂಡ್ ಕಣಕ್ಕಿಳಿಯಬಹುದು.
7 / 11
ಸದ್ಯ ಏಕದಿನ ವಿಶ್ವಕಪ್ನಲ್ಲಿ ಪಾಲ್ಗೊಳ್ಳುವಿಕೆಯ ಬಗ್ಗೆ ಯಾವುದೇ ಸ್ಪಷನೆ ನೀಡದೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿ ಮುಂದೆ ನಾನಾ ಕಾರಣಗಳನ್ನು ಮುಂದಿಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ನಿಂದ ಟೀಮ್ ಇಂಡಿಯಾ ಹಿಂದೆ ಸರಿದಿರುವುದು.
8 / 11
ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ ಪಾಕ್ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ಏಷ್ಯಾಕಪ್ನ್ನು ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡಿದ್ರೆ ಮಾತ್ರ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ತಿಳಿಸಿತ್ತು.
9 / 11
ಅದರಂತೆ ಇದೀಗ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿ ಭಾರತದ ಎಲ್ಲಾ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.
10 / 11
ಇತ್ತ ಪಾಕಿಸ್ತಾನಕ್ಕೆ ಆಗಮಿಸಲು ನಿರಾಕರಿಸಿರುವ ಭಾರತದ ನಡೆಗೆ ಪ್ರತೀಕಾರವಾಗಿ ಇದೀಗ ಪಾಕ್ ಕ್ರಿಕೆಟ್ ಬೋರ್ಡ್ ಏಕದಿನ ವಿಶ್ವಕಪ್ಗೆ ತಮ್ಮ ತಂಡವನ್ನು ಕಳುಹಿಸಲು ಹಿಂದೇಟು ಹಾಕುತ್ತಿದೆ.
11 / 11
ಅಲ್ಲದೆ ಭಾರತದಲ್ಲಿನ ಏಕದಿನ ವಿಶ್ವಕಪ್ನಲ್ಲಿ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಲು ಇದೀಗ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಸಲ್ಲಿಸುವ ವರದಿಯ ಬಳಿಕ ಪಾಕಿಸ್ತಾನ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.