AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಉತ್ತರ

Virat Kohli and Rohit Sharma: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆದಿರುವ ರೋ-ಕೊ ಜೋಡಿಯನ್ನು ಮತ್ತೆ ಮೈದಾನದಲ್ಲಿ ನೋಡಲು ಇನ್ನೊಂದು ತಿಂಗಳು ಕಾಯಲೇಬೇಕು.

ಝಾಹಿರ್ ಯೂಸುಫ್
|

Updated on: Oct 26, 2025 | 10:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲೆರಡು ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದರೆ, ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಟಿ20 ಸರಣಿ ಆಡಲಿದೆ.

1 / 5
ಇತ್ತ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಬ್ಬರು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ರೋ-ಕೊ ಜೋಡಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬ ಪ್ರಶ್ನೆ ಮೂಡುವುದು ಸಹಜ.

2 / 5
ಈ ಪ್ರಶ್ನೆಗೆ ಉತ್ತರ... ನವೆಂಬರ್​ ತಿಂಗಳಾಂತ್ಯದಲ್ಲಿ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯು ನವೆಂಬರ್​ನಲ್ಲಿ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ನವೆಂಬರ್ 30 ರಂದು ನಡೆಯಲಿರುವ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.

3 / 5
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯವು ನವೆಂಬರ್ 30 ರಂದು ನಡೆದರೆ, ದ್ವಿತೀಯ ಮ್ಯಾಚ್ ಡಿಸೆಂಬರ್ 3 ರಂದು ಜರುಗಲಿದೆ. ಹಾಗೆಯೇ ಮೂರನೇ ಪಂದ್ಯವು ಡಿಸೆಂಬರ್ 6 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಜನವರಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಸರಣಿ ಆಡಲಿದೆ.

4 / 5
ಅಂದರೆ ರೋ-ಕೊ ಜೋಡಿಯ ಆರ್ಭಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಮುಂದಿನ ತಿಂಗಳಾಂತ್ಯದವರೆಗೆ ಕಾಯಲೇಬೇಕು. ಅದು ಕೂಡ ಬಲಿಷ್ಠ ಸೌತ್ ಆಫ್ರಿಕಾ ವಿರುದ್ಧ. ಹೀಗಾಗಿ ಮುಂದಿನ ಮೂರು ಪಂದ್ಯಗಳಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ