AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಫಿಟ್​… ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ?

Virat Kohli: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜೂನ್ 13 ರಿಂದ ಶುರುವಾಗಲಿದೆ. ಧರ್ಮಶಾಲಾ, ಲಕ್ನೋ ಹಾಗೂ ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 09, 2026 | 10:09 AM

Share
ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕೊಹ್ಲಿ ಅಪ್ಘಾನ್ ವಿರುದ್ಧ ಕಣಕ್ಕಿಳಿಯುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ. (PC: BCCI)

1 / 6
ಐಪಿಎಲ್ ಫೈನಲ್ ಪಂದ್ಯದ ವೇಳೆ ಸಂಭವಿಸಿದ ಸ್ನಾಯು ಸೆಳೆತದ (ಹ್ಯಾಮ್‌ಸ್ಟ್ರಿಂಗ್) ಸಮಸ್ಯೆಯ ಕಾರಣ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ  ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. (PC: BCCI)

2 / 6
ಬದಲಿ ಆಟಗಾರ ಯಾರು? ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿರುವ ಕಾರಣ, ಅವರ ಸ್ಥಾನಕ್ಕೆ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಅವರು ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. (PC: BCCI)

3 / 6
ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಯಾವಾಗ? ವಿರಾಟ್ ಕೊಹ್ಲಿ ಅವರು ಜುಲೈ 14 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.  ಜುಲೈ ಮಧ್ಯಭಾಗದಲ್ಲಿ ನಡೆಯಲಿರುವ ಇಂಗ್ಲೆಂಡ್ ಪ್ರವಾಸದ ವೇಳೆಗೆ ಕೊಹ್ಲಿ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂದು ಆಯ್ಕೆ ಸಮಿತಿ ಆಶಾವಾದ ವ್ಯಕ್ತಪಡಿಸಿದ್ದಾರೆ. (PC: BCCI)

4 / 6
 ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಪಂದ್ಯಗಳ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್​​ನೆಸ್​ ಸಾಧಿಸುವ ನಿರೀಕ್ಷೆಯಿದೆ. ಅಂದರೆ ಕಿಂಗ್ ಕೊಹ್ಲಿಯನ್ನು ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ನೋಡಬೇಕಿದ್ದರೆ ಜುಲೈ 14 ರವರೆಗೆ ಕಾಯಲೇಬೇಕು. (PC: BCCI)

5 / 6
ಭಾರತ ಏಕದಿನ ತಂಡ: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷ​ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ. (PC: BCCI)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us