AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್​ನಲ್ಲಿ ಮಿಂಚಿದ IPL ಆಡದ ಆಟಗಾರರು..!

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 11, 2023 | 10:08 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಆಸ್ಟ್ರೇಲಿಯಾ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಕೊನೆಯ ದಿನದಾಟದಲ್ಲಿ 280 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಕೇವಲ 234 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 209 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 7
ವಿಶೇಷ ಎಂದರೆ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಯಾವುದೇ ಆಟಗಾರರು ಈ ಬಾರಿಯ ಐಪಿಎಲ್​ನಲ್ಲಿ ಭಾಗವಹಿಸಿರಲಿಲ್ಲ ಎಂಬುದು ವಿಶೇಷ. ಹಾಗಿದ್ರೆ ಐಪಿಎಲ್​ ಆಡದೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪೈನಲ್​ನಲ್ಲಿ ಮಿಂಚಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ..

2 / 7
ಟ್ರಾವಿಸ್ ಹೆಡ್: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 163 ರನ್​ ಬಾರಿಸಿದ ಟ್ರಾವಿಸ್ ಹೆಡ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಅದರಲ್ಲೂ ಅವರು ಕೊನೆಯ ಬಾರಿ ಐಪಿಎಲ್ ಪಂದ್ಯವಾಡಿದ್ದು 2017 ರಲ್ಲಿ. ಆ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ದೂರವೇ ಉಳಿದಿದ್ದರು.

3 / 7
ಸ್ಟೀವ್ ಸ್ಮಿತ್: ಈ ಬಾರಿಯ ಐಪಿಎಲ್ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಹೀಗಾಗಿ ಅವರು ಕೂಡ ಈ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಮೊದಲ ಇನಿಂಗ್ಸ್​ನಲ್ಲಿ ಸ್ಮಿತ್ 121 ರನ್​ ಬಾರಿಸಿ ಮಿಂಚಿದ್ದರು.

4 / 7
ಅಲೆಕ್ಸ್ ಕ್ಯಾರಿ: ಐಪಿಎಲ್ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಅಲೆಕ್ಸ್ ಕ್ಯಾರಿ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 48 ರನ್​ ಬಾರಿಸಿದರೆ, 2ನೇ ಇನಿಂಗ್ಸ್​ನಲ್ಲಿ ಅಜೇಯ 66 ರನ್​ ಕಲೆಹಾಕಿದ್ದರು.

5 / 7
ಇನ್ನು ಬೌಲಿಂಗ್ ವಿಭಾಗದಲ್ಲಿ ನೋಡುವುದಾದರೆ ಈ ಬಾರಿ ಐಪಿಎಲ್ ಆಡದ ನಾಥನ್ ಲಿಯಾನ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ 5 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್​ ಹಾಗೂ ಪ್ಯಾಟ್ ಕಮಿನ್ಸ್ ತಲಾ 4 ವಿಕೆಟ್ ಕಬಳಿಸಿದರು.

6 / 7
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಯದ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಬೌಲಿಂಗ್​ನಲ್ಲಿ ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್​ ಹಾಗೂ ಪ್ಯಾಟ್ ಕಮಿನ್ಸ್ ಅತ್ಯುತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿರುವುದು ವಿಶೇಷ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ