WTC ಫೈನಲ್ನಲ್ಲಿ ಮಿಂಚಿದ IPL ಆಡದ ಆಟಗಾರರು..!
TV9 Web | Updated By: ಝಾಹಿರ್ ಯೂಸುಫ್
Updated on:
Jun 11, 2023 | 10:08 PM
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ.
1 / 7
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊನೆಯ ದಿನದಾಟದಲ್ಲಿ 280 ರನ್ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಕೇವಲ 234 ರನ್ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 209 ರನ್ಗಳ ಭರ್ಜರಿ ಜಯ ಸಾಧಿಸಿದೆ.
2 / 7
ವಿಶೇಷ ಎಂದರೆ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಯಾವುದೇ ಆಟಗಾರರು ಈ ಬಾರಿಯ ಐಪಿಎಲ್ನಲ್ಲಿ ಭಾಗವಹಿಸಿರಲಿಲ್ಲ ಎಂಬುದು ವಿಶೇಷ. ಹಾಗಿದ್ರೆ ಐಪಿಎಲ್ ಆಡದೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪೈನಲ್ನಲ್ಲಿ ಮಿಂಚಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ..
3 / 7
ಟ್ರಾವಿಸ್ ಹೆಡ್: ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 163 ರನ್ ಬಾರಿಸಿದ ಟ್ರಾವಿಸ್ ಹೆಡ್ ಈ ಬಾರಿಯ ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಅದರಲ್ಲೂ ಅವರು ಕೊನೆಯ ಬಾರಿ ಐಪಿಎಲ್ ಪಂದ್ಯವಾಡಿದ್ದು 2017 ರಲ್ಲಿ. ಆ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ದೂರವೇ ಉಳಿದಿದ್ದರು.
4 / 7
ಸ್ಟೀವ್ ಸ್ಮಿತ್: ಈ ಬಾರಿಯ ಐಪಿಎಲ್ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಹೀಗಾಗಿ ಅವರು ಕೂಡ ಈ ಬಾರಿ ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನ ಮೊದಲ ಇನಿಂಗ್ಸ್ನಲ್ಲಿ ಸ್ಮಿತ್ 121 ರನ್ ಬಾರಿಸಿ ಮಿಂಚಿದ್ದರು.
5 / 7
ಅಲೆಕ್ಸ್ ಕ್ಯಾರಿ: ಐಪಿಎಲ್ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಅಲೆಕ್ಸ್ ಕ್ಯಾರಿ ಈ ಬಾರಿಯ ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 48 ರನ್ ಬಾರಿಸಿದರೆ, 2ನೇ ಇನಿಂಗ್ಸ್ನಲ್ಲಿ ಅಜೇಯ 66 ರನ್ ಕಲೆಹಾಕಿದ್ದರು.
6 / 7
ಇನ್ನು ಬೌಲಿಂಗ್ ವಿಭಾಗದಲ್ಲಿ ನೋಡುವುದಾದರೆ ಈ ಬಾರಿ ಐಪಿಎಲ್ ಆಡದ ನಾಥನ್ ಲಿಯಾನ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ 5 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ತಲಾ 4 ವಿಕೆಟ್ ಕಬಳಿಸಿದರು.
7 / 7
ಅಂದರೆ ಈ ಬಾರಿಯ ಐಪಿಎಲ್ನಲ್ಲಿ ಕಣಕ್ಕಿಳಿಯದ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್ನಲ್ಲಿ ಮಿಂಚಿದರೆ, ಬೌಲಿಂಗ್ನಲ್ಲಿ ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ಅತ್ಯುತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವುದು ವಿಶೇಷ.