AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಪಂತ್’ಸ್ಟಿಕ್ ಬ್ಯಾಟಿಂಗ್​ಗೆ ಸೆಹ್ವಾಗ್ ದಾಖಲೆಯೇ ಶೇಕಿಂಗ್..!

Rishabh Pant Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಎಡಗೈ ದಾಂಡಿಗ ರಿಷಭ್ ಪಂತ್, ಬೆನ್ ಸ್ಟೋಕ್ಸ್ ಹಾಗೂ ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ದಾಂಡಿಗರು ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ತಲಾ 9 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟಿರುವ ರಿಷಭ್ ಶೀಘ್ರದಲ್ಲೇ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಎನಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 24, 2025 | 2:53 PM

Share
ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಸಿಕ್ಸರ್​ಗಳ ಸುರಿಮಳೆಗೈದಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 6 ಭರ್ಜರಿ ಸಿಕ್ಸರ್​ಗಳೊಂದಿಗೆ 134 ರನ್ ಬಾರಿಸಿದ್ದ ರಿಷಭ್, ದ್ವಿತೀಯ ಇನಿಂಗ್ಸ್​ನಲ್ಲಿ 3 ಸಿಕ್ಸ್​ಗಳೊಂದಿಗೆ 118 ರನ್ ಕಲೆಹಾಕಿದ್ದಾರೆ.

1 / 5
ಈ 9 ಸಿಕ್ಸರ್​ಗಳೊಂದಿಗೆ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಕೇವಲ 44 ಪಂದ್ಯಗಳ ಮೂಲಕ ಎಂಬುದು ವಿಶೇಷ. ಇನ್ನು ರಿಷಭ್ ಪಂತ್ ಮುಂದಿರುವ ಟಾರ್ಗೆಟ್​ಗಳು ರೋಹಿತ್ ಶರ್ಮಾ ಹಾಗೂ ವೀರೇಂದ್ರ ಸೆಹ್ವಾಗ್.

2 / 5
ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಪರ 178 ಟೆಸ್ಟ್ ಇನಿಂಗ್ಸ್ ಆಡಿರುವ ಸೆಹ್ವಾಗ್ 10346 ಎಸೆತಗಳಲ್ಲಿ 90 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಭಾರತದ ಪರ 116 ಟೆಸ್ಟ್ ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 7538 ಎಸೆತಗಳನ್ನು ಎದುರಿಸಿರುವ ಅವರು ಬರೋಬ್ಬರಿ 88 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಹಾಗೆಯೇ ಮಹೇಂದ್ರ ಸಿಂಗ್ 144 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು​ 78 ಸಿಕ್ಸ್ ಬಾರಿಸಿದ್ದಾರೆ.

4 / 5
ಇದೀಗ ಧೋನಿಯನ್ನು ಹಿಂದಿಕ್ಕಿರುವ ರಿಷಭ್ ಪಂತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಪಂಟರ್ ಪಂತ್ ಈವರೆಗೆ 77 ಟೆಸ್ಟ್ ಇನಿಂಗ್ಸ್ ಆಡಿದ್ದು, ಈ ವೇಳೆ ಎದುರಿಸಿದ 4322 ಎಸೆತಗಳಲ್ಲಿ ಬರೋಬ್ಬರಿ 82 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಅಂದರೆ ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ರಿಷಭ್ ಪಂತ್ ಇನ್ನು 9 ಸಿಕ್ಸ್ ಬಾರಿಸಿದರೆ, ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಸರಣಿಯಲ್ಲಿ ಪಂತ್​ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ