ರಚಿನ್ ರವೀಂದ್ರ ಮೂಲತಃ ಬೆಂಗಳೂರಿನ ಹುಡುಗ. ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ಅತ್ತ ಕ್ರಿಕೆಟ್ ಪ್ರೇಮಿಯಾಗಿದ್ದ ರವಿ ಕೃಷ್ಣಮೂರ್ತಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ನ ಸ್ಥಾಪಿಸಿದ್ದರು.