India Squad For Sri Lanka: ಭಾರತ ತಂಡದಲ್ಲಿ ಹೊಸಮುಖ: ಯಾರು ಈ ಸೌರಭ್?

Edited By:

Updated on: Feb 19, 2022 | 5:58 PM

Who Is Saurabh Kumar: ಈ ಹಿಂದೆ ಇಂಗ್ಲೆಂಡ್ ವಿರುದ್ದದ ಸರಣಿಗೆ ಸೌರಭ್ ಕುಮಾರ್ ನೆಟ್ ಬೌಲರ್ ಆಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 / 6
 ಶ್ರೀಲಂಕಾ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆ ಮಾಡಲಾದ ಟೆಸ್ಟ್ ತಂಡದಲ್ಲಿ ಹೊಸಮುಖವೊಂದು ಕಾಣಿಸಿಕೊಂಡಿದೆ. ಟೀಮ್ ಇಂಡಿಯಾ ಟೆಸ್ಟ್ ಬಳಗದಲ್ಲಿ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರ ಬೆನ್ನಲ್ಲೇ ಯಾರು ಈ ಸೌರಭ್ ಕುಮಾರ್ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಹಾಗಿದ್ರೆ ಯಾರು ಈ ಸೌರಭ್ ಕುಮಾರ್?

ಶ್ರೀಲಂಕಾ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆ ಮಾಡಲಾದ ಟೆಸ್ಟ್ ತಂಡದಲ್ಲಿ ಹೊಸಮುಖವೊಂದು ಕಾಣಿಸಿಕೊಂಡಿದೆ. ಟೀಮ್ ಇಂಡಿಯಾ ಟೆಸ್ಟ್ ಬಳಗದಲ್ಲಿ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರ ಬೆನ್ನಲ್ಲೇ ಯಾರು ಈ ಸೌರಭ್ ಕುಮಾರ್ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಹಾಗಿದ್ರೆ ಯಾರು ಈ ಸೌರಭ್ ಕುಮಾರ್?

2 / 6

ಸೌರಭ್ ಕುಮಾರ್ ಮೂಲತಃ ಉತ್ತರ ಪ್ರದೇಶದ ಕ್ರಿಕೆಟಿಗ. ಎಡಗೈ ಸ್ಪಿನ್ ಬೌಲಿಂಗ್ ಮೂಲಕ ಈಗಾಗಲೇ ದೇಶೀಯ ಅಂಗಳದಲ್ಲಿ ಸೌರಭ್ ಕುಮಾರ್ ಸಂಚಲನ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೆ ಉತ್ತಮವಾಗಿ ಬ್ಯಾಟಿಂಗ್ ಕೂಡ ಮಾಡಬಲ್ಲ ಆಟಗಾರ. ಹೀಗಾಗಿ ಆಲ್​ರೌಂಡರ್ ಸ್ಪಿನ್ನರ್ ಆಗಿ ಸೌರಭ್ ಕುಮಾರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

3 / 6

ಈ ಹಿಂದೆ ಇಂಗ್ಲೆಂಡ್ ವಿರುದ್ದದ ಸರಣಿಗೆ ಸೌರಭ್ ಕುಮಾರ್ ನೆಟ್ ಬೌಲರ್ ಆಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಹಾಗೆ ಸೌರಭ್ ಕುಮಾರ್ ದೇಶೀಯ ಅಂಗಳದಲ್ಲಿ ಅತ್ಯುತ್ತಮ ದಾಖಲೆಗಳನ್ನು ಹೊಂದಿದ್ದಾರೆ. 2015-16ರಲ್ಲಿ ಗುಜರಾತ್ ವಿರುದ್ಧ ಉತ್ತರ ಪ್ರದೇಶ ಪರ ತಮ್ಮ ಮೊದಲ ಪಂದ್ಯದಲ್ಲಿ 10 ವಿಕೆಟ್ ಕಬಳಿಸಿ ಮಿಂಚಿದ್ದರು. ಆ ಬಳಿಕ ಹಿಂತಿರುಗಿ ನೋಡಲೇ ಇಲ್ಲ.

4 / 6

2018-19ರಲ್ಲಿ ಅವರು ದುಲೀಪ್ ಟ್ರೋಫಿಯಲ್ಲಿ 19 ವಿಕೆಟ್‌ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 2019-20 ರ ರಣಜಿ ಟ್ರೋಫಿಯಲ್ಲಿ ಸೌರಭ್ 44 ವಿಕೆಟ್​ಗಳನ್ನು ಪಡೆದು ಸಂಚಲನ ಸೃಷ್ಟಿಸಿದ್ದರು. ಈ ಭರ್ಜರಿ ಪ್ರದರ್ಶನದ ಕಾರಣ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದರು.

5 / 6

ಇನ್ನು 46 ಪ್ರಥಮ ದರ್ಜೆ ಪಂದ್ಯವಾಡಿರುವ ಸೌರಭ್ ಕುಮಾರ್ ಒಟ್ಟು 196 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 1572 ರನ್ ಕಲೆಹಾಕಿದ್ದಾರೆ. ಇದಲ್ಲದೆ 25 ಲೀಸ್ಟ್ ಎ ಪಂದ್ಯಗಳಿಂದ 37 ವಿಕೆಟ್ ಪಡೆದಿದ್ದಾರೆ. ಇನ್ನು 33 ಟಿ20 ಪಂದ್ಯಗಳಿಂದ 24 ವಿಕೆಟ್ ಉರುಳಿಸಿದ್ದಾರೆ. ಒಟ್ಟಿನಲ್ಲಿ ದೇಶೀಯ ಅಂಗಳದಲ್ಲಿ 200 ಕ್ಕೂ ಅಧಿಕ ವಿಕೆಟ್ ಉರುಳಿಸುವ ಮೂಲಕ ಮಿಂಚಿರುವ 2 ಶತಕ ಹಾಗೂ 8 ಅರ್ಧಶತಕಗಳನ್ನೂ ಕೂಡ ಬಾರಿಸಿದ್ದಾರೆ. ಇದೇ ಕಾರಣದಿಂದಾಗಿ ಇದೀಗ 28 ವರ್ಷದ ಎಡಗೈ ಸ್ಪಿನ್ನರ್​ಗೆ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಚಾನ್ಸ್ ಸಿಕ್ಕಿದೆ.

6 / 6

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್, ಶುಭ್​ಮನ್ ಗಿಲ್, ಕೆಎಸ್ ಭರತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್, ಸೌರಭ್ ಕುಮಾರ್

Published On - 5:57 pm, Sat, 19 February 22

Loading...
Unable to load recommendations.
Follow Us