Team India: ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯದ 9 ಆಟಗಾರರು ಇವರೇ ನೋಡಿ..!
TV9 Web | Updated By: ಝಾಹಿರ್ ಯೂಸುಫ್
Updated on:
Aug 09, 2022 | 2:00 PM
India Squad For Asia Cup 2022: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
1 / 11
ಇದೇ ತಿಂಗಳ 27ರಿಂದ ಶುರುವಾಗಲಿರುವ ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಇನ್ನು 15 ಸದಸ್ಯರ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ 9 ಪ್ರಮುಖ ಆಟಗಾರರು ಕೂಡ ವಿಫಲರಾಗಿದ್ದಾರೆ. ಅವರೆಂದರೆ...
2 / 11
ಇಶಾನ್ ಕಿಶನ್- ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಳ್ಳುತ್ತಿದ್ದ ಇಶಾನ್ ಕಿಶನ್ ಅವರನ್ನು ಈ ಬಾರಿ ಆಯ್ಕೆ ಮಾಡಿಲ್ಲ. ಈ ಹಿಂದೆ ತಂಡದಲ್ಲಿ ಹೆಚ್ಚುವರಿ ಆರಂಭಿಕನಾಗಿಯಾದರೂ ಕಿಶನ್ಗೆ ಅವಕಾಶ ಸಿಗುತ್ತಿತ್ತು, ಆದರೆ ಈ ಸಲ ಟೀಮ್ ಇಂಡಿಯಾ ಆಯ್ಕೆ ಸಮಿತಿ ಇಶಾನ್ ಕಿಶನ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂಬುದು ವಿಶೇಷ.
3 / 11
ಶ್ರೇಯಸ್ ಅಯ್ಯರ್- ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದಾಗ್ಯೂ ಅವರನ್ನು 15 ಸದಸ್ಯರ ಬಳಗಕ್ಕೆ ಆಯ್ಕೆ ಮಾಡಿಲ್ಲ. ಬದಲಾಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಇರಿಸಲಾಗಿದೆ.
4 / 11
ಸಂಜು ಸ್ಯಾಮ್ಸನ್- ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಯಾಮ್ಸನ್ ನಿರೀಕ್ಷಿತ ಆಟ ಪ್ರದರ್ಶಿಸಿರಲಿಲ್ಲ. ಇತ್ತ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಾಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇರುವ ಕಾರಣ ಸ್ಯಾಮ್ಸನ್ ಅವರನ್ನು ಕೂಡ ತಂಡದಿಂದ ಕೈ ಬಿಡಲಾಗಿದೆ.
5 / 11
ಕುಲದೀಪ್ ಯಾದವ್- ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ದದ ಪಂದ್ಯದಲ್ಲಿ ಅದ್ಭುತ ಸ್ಪಿನ್ ಮೋಡಿ ಮಾಡಿದ್ದರು. ಇದಾಗ್ಯೂ ಅವರು ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
6 / 11
ದೀಪಕ್ ಚಹರ್- ಟೀಮ್ ಇಂಡಿಯಾ ವೇಗಿ ದೀಪಕ್ ಚಹರ್ ತಂಡದ ಖಾಯಂ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಆದರೆ ಐಪಿಎಲ್ ಆರಂಭಕ್ಕೂ ಮುನ್ನ ಗಾಯಗೊಂಡ ಪರಿಣಾಮ ಅವರು ಆ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಂಡರೂ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡಲಾಗಿದೆ.
7 / 11
ಅಕ್ಷರ್ ಪಟೇಲ್- ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಆಲ್ರೌಂಡರ್ ಪ್ರದರ್ಶನ ನೀಡಿದ್ದ ಅಕ್ಷರ್ ಪಟೇಲ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಏಕೆಂದರೆ ತಂಡದಲ್ಲಿ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಜಡೇಜಾ ಹಾಗೂ ದೀಪಕ್ ಹೂಡಾ ಇದ್ದಾರೆ. ಹೀಗಾಗಿ ಅಕ್ಷರ್ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡಲಾಗಿದೆ.
8 / 11
ಮೊಹಮ್ಮದ್ ಶಮಿ- ಟೀಮ್ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರ ಟಿ20 ಕ್ರಿಕೆಟ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಶಮಿಯನ್ನು ಯಾವುದೇ ಟಿ20 ಸರಣಿಗಳಿಗೆ ಪರಿಗಣಿಸಲಾಗಿಲ್ಲ. ಅದರಂತೆ ಇದೀಗ ಏಷ್ಯಾಕಪ್ ತಂಡದಿಂದಲೂ ಕೈ ಬಿಡಲಾಗಿದೆ.
9 / 11
ಹರ್ಷಲ್ ಪಟೇಲ್- ವೆಸ್ಟ್ ಇಂಡೀಸ್ ಸರಣಿಯ ವೇಳೆ ಗಾಯಗೊಂಡಿರುವ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಅವರನ್ನು ಏಷ್ಯಾಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗಿಲ್ಲ.
10 / 11
ಜಸ್ಪ್ರೀತ್ ಬುಮ್ರಾ- ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಯಾರ್ಕರ್ ಕಿಂಗ್ ಬುಮ್ರಾ ಕೂಡ ಏಷ್ಯಾಕಪ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಏಷ್ಯಾಕಪ್ ಟೀಮ್ ಇಂಡಿಯಾ ಬುಮ್ರಾ ಕೂಡ ಕಾಣಿಸಿಕೊಂಡಿಲ್ಲ.
11 / 11
ಏಷ್ಯಾಕಪ್‌ಗೆ ಆಯ್ಕೆಯಾದ ಟೀಮ್ ಇಂಡಿಯಾ ಹೀಗಿದೆ. ರೋಹಿತ್ ಶರ್ಮಾ (ಕ್ಯಾಪ್ಟನ್), ಕೆಎಲ್ ರಾಹುಲ್ (ವಿಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ವಾಕ್), ದಿನೇಶ್ ಕಾರ್ತಿಕ್ (ವಾಕ್), ಹಾರ್ದಿಕ್ ಪಾಂಡ್ಯ, ಆರ್ ಜಡೇಜಾ, ಆರ್ ಅಶ್ವಿನ್, ವೈ ಚಾಹಲ್, ಆರ್ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
Published On - 1:58 pm, Tue, 9 August 22