AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಒಂದು ಸ್ಥಾನಕ್ಕಾಗಿ ಮೂವರ ನಡುವೆ ಪೈಪೋಟಿ..!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಅಲಭ್ಯರಾಗಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಟೀಮ್ ಇಂಡಿಯಾ ಪರ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಪ್ರಶ್ನೆ.

TV9 Web
| Edited By: |

Updated on: Jan 31, 2024 | 7:34 AM

Share
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯದಿಂದ ಭಾರತ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಅವರು ಇದೀಗ ಹೆಚ್ಚಿನ ಚಿಕಿತ್ಸೆಗೆ ಎನ್​ಸಿಎ ತೆರಳಿದ್ದಾರೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಜಡೇಜಾ ಬದಲಿ ಆಟಗಾರ ಕಣಕ್ಕಿಳಿಯುವುದು ಖಚಿತ.

1 / 6
ಆದರೆ ಇಲ್ಲಿ ರವೀಂದ್ರ ಜಡೇಜಾ ಅವರ ಸ್ಥಾನದಲ್ಲಿ ಕಣಕ್ಕಿಳಿಯಲು ಮೂವರು ಆಟಗಾರರ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂವರು ಕೂಡ ಸ್ಪಿನ್ನರ್​ಗಳು ಎಂಬುದು ವಿಶೇಷ. ಹೀಗಾಗಿ ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ. ಆ ಮೂವರು ಆಟಗಾರರು ಯಾರೆಂದರೆ...

2 / 6
1- ಕುಲ್ದೀಪ್ ಯಾದವ್: ಟೀಮ್ ಇಂಡಿಯಾ ಪರ 8 ಟೆಸ್ಟ್ ಪಂದ್ಯಗಳನ್ನಾಡಿರುವ ಕುಲ್ದೀಪ್ ಯಾದವ್ ಒಟ್ಟು 34 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 9 ಇನಿಂಗ್ಸ್​ ಆಡಿರುವ ಅವರು ಕಲೆಹಾಕಿರುವುದು ಕೇವಲ 94 ರನ್​ಗಳು ಮಾತ್ರ. ಇಲ್ಲಿ ಪರಿಪೂರ್ಣ ಸ್ಪಿನ್ನರ್​ರೊಬ್ಬರನ್ನು ಕಣಕ್ಕಿಳಿಸಲು ಬಯಸಿದರೆ ಕುಲ್ದೀಪ್ ಯಾದವ್ ಮೊದಲ ಆಯ್ಕೆ ಆಗಿರಲಿದ್ದಾರೆ.

3 / 6
2- ವಾಷಿಂಗ್ಟನ್ ಸುಂದರ್: ರವೀಂದ್ರ ಜಡೇಜಾ ಅವರ ಸ್ಥಾನದಲ್ಲಿ ಬದಲಿ ಆಲ್​ರೌಂಡರ್ ಆಟಗಾರನಾಗಿ ವಾಷಿಂಗ್ಟನ್ ಸುಂದರ್ ಆಯ್ಕೆಯಾಗಿದ್ದಾರೆ. ಸುಂದರ್​ ಇದುವರೆಗೆ ಟೀಮ್ ಇಂಡಿಯಾ 4 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 6 ವಿಕೆಟ್ ಹಾಗೂ 96 ರನ್​ಗಳಿಸಿದ್ದಾರೆ. ಅಂದರೆ ಜಡ್ಡು ಸ್ಥಾನದಲ್ಲಿ ಮತ್ತೋರ್ವ ಆಲ್​ರೌಂಡರ್​ನನ್ನು ಕಣಕ್ಕಿಳಿಸಲು ಮುಂದಾದರೆ ಸುಂದರ್​ಗೆ ಅವಕಾಶ ಸಿಗಲಿದೆ.

4 / 6
3- ಸೌರಭ್ ಕುಮಾರ್: ಉತ್ತರ ಪ್ರದೇಶದ ಸೌರಭ್ ಕುಮಾರ್ ಈ ಹಿಂದೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ದೊರೆತಿರಲಿಲ್ಲ. ಇದೀಗ ಮತ್ತೊಮ್ಮೆ ಎಡಗೈ ಸ್ಪಿನ್-ಆಲ್​ರೌಂಡರ್ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 68 ಪಂದ್ಯಗಳನ್ನಾಡಿರುವ ಸೌರಭ್ 2061 ರನ್​ಗಳನ್ನು ಕಲೆಹಾಕಿದ್ದಾರೆ. ಹಾಗೆಯೇ 290 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಸೌರಭ್ ಕುಮಾರ್​ಗೆ ಅವಕಾಶ ಸಿಕ್ಕರೂ ಅಚ್ಚರಿಪಡಬೇಕಿಲ್ಲ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅವೇಶ್ ಖಾನ್.

6 / 6
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್