AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026 RCB vs LSG: ಐಪಿಎಲ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಆರಂಭಿಕ ಜೋಡಿ ಬದಲಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 06, 2026 | 1:53 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL)

1 / 6
ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಕೆಲ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಇತ್ತ ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಳೆದ ಕೆಲ ಪಂದ್ಯಗಳಲ್ಲಿ ಆರ್​ಸಿಬಿ ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಆದರೆ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿದ ಮೂರು ಇನಿಂಗ್ಸ್​ಗಳಲ್ಲಿ ಬೆಥೆಲ್ ಕಲೆಹಾಕಿರುವುದು ಕೇವಲ 39 ರನ್​ಗಳು ಮಾತ್ರ. ಅಲ್ಲದೆ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಎಲ್​ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸಲಿದ್ದಾರೆಯೇ ಎಂಬುದೇ ಪ್ರಶ್ನೆ. (PC: IPL)

3 / 6
ಏಕೆಂದರೆ ಆರ್​ಸಿಬಿ ತಂಡದಲ್ಲಿ ಪ್ರಾಪರ್ ಓಪನರ್ ಆಗಿ ಜೋರ್ಡನ್ ಕಾಕ್ಸ್​ ಇದ್ದಾರೆ. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಕಾಕ್ಸ್​ ಈ ಹಿಂದೆ ದಿ ಹಂಡ್ರೆಡ್ ಲೀಗ್ ಹಾಗೂ ಇಂಟರ್​ನ್ಯಾಷನಲ್ ಟಿ20 ಲೀಗ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದರು.  (PC: IPL)

4 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 165 ಇನಿಂಗ್ಸ್ ಆಡಿರುವ ಜೋರ್ಡನ್ ಕಾಕ್ಸ್ ಬರೋಬ್ಬರಿ 4045 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಸ್ಫೋಟಕ ಶತಕ ಹಾಗೂ 21 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ನಡುವೆ ಅವರು 341 ಫೋರ್ ಹಾಗೂ 161 ಸಿಕ್ಸ್​ಗಳನ್ನು ಸಹ ಸಿಡಿಸಿದ್ದಾರೆ. (PC: IPL)

5 / 6
ಹೀಗಾಗಿಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಜೋರ್ಡನ್ ಕಾಕ್ಸ್ ಅವರನ್ನು ಕಣಕ್ಕಿಳಿಸಲಿದ್ದಾರಾ ಎಂಬುದೇ ಕುತೂಹಲ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಕಾಕ್ಸ್​ ಒಂದೇ ಒಂದು ಪಂದ್ಯವಾಡಿಲ್ಲ. ಇತ್ತ ಸಿಕ್ಕ ಅವಕಾಶಗಳಲ್ಲಿ ಬೆಥೆಲ್ ವಿಫಲರಾಗಿದ್ದು, ಹೀಗಾಗಿ ಕಾಕ್ಸ್​ ಅವರನ್ನು ಕಣಕ್ಕಿಳಿಸಿ ಆರ್​ಸಿಬಿ ಪ್ರಯೋಗ ನಡೆಸುವ ಸಾಧ್ಯತೆಯಿದೆ. (PC: RCB)

6 / 6
Follow Us
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ

ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ

ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ

ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ

IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ

ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ

ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ

ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!

ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?