Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

Team India: ಭಾರತ ಟಿ20 ತಂಡದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಇದೀಗ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಏಕೆಂದರೆ ಇತ್ತೀಚೆಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತ ತಂಡದ ನಾಯಕನ ಆಯ್ಕೆಯನ್ನು ಆಯ್ಕೆದಾರರು ನಿರ್ಧರಿಸುತ್ತಾರೆ. ಅವರೊಂದಿಗೆ ಚರ್ಚಿಸಿದ ನಂತರ ನಾವು ಅದನ್ನು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ. ಇಲ್ಲಿ ಯಾರೊಬ್ಬರ ಹೆಸರನ್ನು ಸೂಚಿಸದಿರುವ ಕಾರಣ ನಾಯಕತ್ವಕ್ಕಾಗಿ ಪೈಪೋಟಿ ಇರುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Jul 03, 2024 | 1:08 PM

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಭಾರತ ಟಿ20 ತಂಡದ ಮುಂದಿನ ನಾಯಕ ಯಾರೆಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರವಾಗಿ ಸದ್ಯ ನಾಲ್ವರ ಹೆಸರುಗಳು ಕೇಳಿ ಬರುತ್ತಿದೆ. ಅವರೆಂದರೆ....

1 / 5
ಹಾರ್ದಿಕ್ ಪಾಂಡ್ಯ: ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಂಡ್ಯ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಭಾರತ ತಂಡವನ್ನು 16 ಪಂದ್ಯಗಳಲ್ಲಿ ಮುನ್ನಡೆಸಿರುವ ಪಾಂಡ್ಯ 10 ಗೆಲುವು ತಂದುಕೊಟ್ಟಿದ್ದಾರೆ. ಅಲ್ಲದೆ ಪ್ರಸ್ತುತ ಟಿ20 ತಂಡದ ಉಪನಾಯಕರಾಗಿರುವ ಕಾರಣ ಅವರಿಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ.

2 / 5
ಜಸ್​ಪ್ರೀತ್ ಬುಮ್ರಾ: ಭಾರತ ತಂಡಕ್ಕೆ ಕೇವಲ ಬ್ಯಾಟರ್​ಗಳನ್ನು ಮಾತ್ರ ನಾಯಕರನ್ನಾಗಿ ಮಾಡಲಾಗುತ್ತಿದೆ ಎಂಬ ಅಪವಾದ ಈ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇದೇ ಕಾರಣದಿಂದಾಗಿ ಈ ಹಿಂದೆ ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಟಿ20 ತಂಡಕ್ಕೂ ಬುಮ್ರಾ ಹೆಸರು ಕೇಳಿ ಬರುತ್ತಿದೆ. ಈ ಹಿಂದೆ 2 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಬುಮ್ರಾ ಎರಡೂ ಪಂದ್ಯಗಳಲ್ಲೂ ಗೆಲುವಿನ ರುಚಿ ನೋಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಬುಮ್ರಾ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

3 / 5
ರಿಷಭ್ ಪಂತ್: ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಬಿಂಬಿತವಾಗಿರುವ ರಿಷಭ್ ಪಂತ್ ಕೂಡ ಈ ಹಿಂದೆ 5 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 2 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಇನ್ನು ಒಂದು ಪಂದ್ಯ ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಧೋನಿ ಬಳಿಕ ಮತ್ತೆ ವಿಕೆಟ್ ಕೀಪರ್​ಗೆ ಕ್ಯಾಪ್ಟನ್ ನೀಡಲು ಮುಂದಾದರೆ ಪಂತ್​ಗೆ ನಾಯಕತ್ವ ಒಲಿಯಲಿದೆ.

4 / 5
ಸೂರ್ಯಕುಮಾರ್ ಯಾದವ್: ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇತ್ತ ಟಿ20 ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನದೊಂದಿಗೆ ಮಿಂಚುತ್ತಿರುವ ಸೂರ್ಯಕುಮಾರ್ ಯಾದವ್ ಕೂಡ ಭಾರತ ತಂಡದ ನಾಯಕತ್ವದ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಸೂರ್ಯನಿಗೆ ಟೀಮ್ ಇಂಡಿಯಾ ಟಿ20 ತಂಡದ ಕ್ಯಾಪ್ಟನ್ಸಿ ಒಲಿದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ

ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ

ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!

ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು

ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ

ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು

ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ

‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್

ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ